Site icon Kannada News-suddikshana

ಸಂಚಾರಿ ನಿಯಮ ಉಲ್ಲಂಘನೆ, ದಂಡ ಪಾವತಿದಾರರಿಗೆ ಗುಡ್ ನ್ಯೂಸ್!

ಸಂಚಾರ

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದವರು ದಂಡ ಪಾವತಿಸಲೇಬೇಕು. ದಂಡ ಪಾವತಿದಾರರಿಗೆ ಗುಡ್ ನ್ಯೂಸ್ ಇದು.  

READ ALSO THIS STORY: ವಿದ್ಯುತ್ ಪ್ರವಹಿಸಿ ದಾವಣಗೆರೆ ಸರ್ಕಾರಿ ಕಾಲೇಜಿನ ಉಪನ್ಯಾಸಕ ದುರ್ಮರಣ: ಹಬ್ಬದ ಮನೆಯಲ್ಲೀಗ ಸೂತಕ!

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ಮೂಲಕ ವಿಧಿಸಿರುವ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡಲಾಗಿರುತ್ತದೆ. ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಬಾಕಿ
ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನಾಚರಣೆ:

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಆಗಸ್ಟ್ 31 ರಂದು ಮೇಜರ್ ಧ್ಯಾನ್ ಚಂದ್ ರವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ
ದಿನಾಚರಣೆಯನ್ನು ಆಯೋಜಿಸಲಾಗಿದೆ.

ಸಂಡೇ ಆನ್ ಸೈಕಲ್ (ಸೈಕೋಥನ್) ಕಾರ್ಯಕ್ರಮವು ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ ಸೈಕಲ್‍ನೊಂದಿಗೆ ಅಂದು ಬೆಳಿಗ್ಗೆ 6 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಹರ್ಷ ತಿಳಿಸಿದ್ದಾರೆ.

Exit mobile version