ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರೇಷನ್ ಕಾರ್ಡ್ ಅನ್ನು ಆಧಾರ್‌ಗೆ ಲಿಂಕ್ ಮಾಡುವ ಗಡುವನ್ನು ಸರ್ಕಾರ ವಿಸ್ತರಣೆ ಮಾಡಿದೆ.
ಆಹಾರ ಸಬ್ಸಿಡಿ ಖಾತೆಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪಡಿತರ ಚೀಟಿಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆಯೂ ಸರ್ಕಾರ ಈ ಡೆಡ್‌ಲೈನ್ ಅನ್ನು ಹಲವು ಬಾರಿ ವಿಸ್ತರಿಸಿತ್ತು.