SUDDIKSHANA KANNADA NEWS/ DAVANAGERE/ DATE-02-06-2025
ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ರಾಜ್ಯ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಘೋಷಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್ ಈ ಘೋಷಣೆ ಮಾಡಿದ್ದಾರೆ.
ಬಾನು ಮುಷ್ತಾಕ್ ಅವರು ಕನ್ನಡದ ಕೃತಿಯ ಮೂಲಕ ಬೂಕರ್ ಪ್ರಶಸ್ತಿಗೆ ಭಾಜನರಾಗಿ ಜಗತ್ತಿಗೆ ಕನ್ನಡದ ಜ್ಯೋತಿಯನ್ನು ಬೆಳಗಿ ಕನ್ನಡವನ್ನು ಉಳಿಸಿದ್ದಾರೆ. ಅನುವಾದವನ್ನು ಮಾಡಿರುವ ದೀಪಾ ಅವರು ದೇಶಕ್ಕೆ
ಆರತಿಯಾಗಿದ್ದಾರೆ ಎಂದು ಹೆಮ್ಮೆಪಡುತ್ತೇನೆ. ಇಬ್ಬರು ಸಾಧಕರು ಸಪ್ತಸಾಗರದಾಚೆ ಕರ್ನಾಟಕಕ್ಕೆ ಗೌರವವನ್ನು ತಂದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಪ್ರತಿಯೊಬ್ಬರಿಗೂ ಕೂಡ ಅವರ ಭಾಷೆ, ಸಂಸ್ಕೃತಿ ಮುಖ್ಯ. ನಮ್ಮ ಭಾಷೆ ಮತ್ತು ನಾಡಿನ ಗೌರವವನ್ನು ಹೆಚ್ಚಿಸಿದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ತುಂಬು ಹೃದಯದ ಅಭಿನಂದನೆಗಳು. ಅವರಿಗೆ
ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂ.ಗಳನ್ನು ಗೌರವಪೂರ್ವಕವಾಗಿ ಘೋಷಿಸುತ್ತಿದ್ದೇನೆ ಎಂದು ಹೇಳಿದರು.