Home ದಾವಣಗೆರೆ ಶೈಕ್ಷಣಿಕ ಪ್ರಗತಿಗೆ ಛಾಯಾ ದೇವಣ ಗಾಂವ್ಕರ್ ವರದಿಯ ಶಿಫಾರಸ್ಸುಗಳ ಜಾರಿಗೆ ಸರ್ಕಾರ ಬದ್ದ: ಸಿ.ಎಂ ಸಿದ್ದರಾಮಯ್ಯ ಘೋಷಣೆ
ದಾವಣಗೆರೆನವದೆಹಲಿಬೆಂಗಳೂರು

ಶೈಕ್ಷಣಿಕ ಪ್ರಗತಿಗೆ ಛಾಯಾ ದೇವಣ ಗಾಂವ್ಕರ್ ವರದಿಯ ಶಿಫಾರಸ್ಸುಗಳ ಜಾರಿಗೆ ಸರ್ಕಾರ ಬದ್ದ: ಸಿ.ಎಂ ಸಿದ್ದರಾಮಯ್ಯ ಘೋಷಣೆ

Share
ಸಿದ್ದರಾಮಯ್ಯ
Share

SUDDIKSHANA KANNADA NEWS/DAVANAGERE/DATE:19_12_2025

ಬೆಳಗಾವಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕುರಿತ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡೆ ಹಿಂದೆ 1980 ರ ಆಸುಪಾಸಿನಲ್ಲಿ ಧರಂಸಿಂಗ್ ಅವರ ಅಧ್ಯಕ್ಷತೆಯಲ್ಲಿ ಹೈಪವರ್ ಸಮಿತಿಯನ್ನು ಪ್ರಾರಂಭಿಸಲಾಯಿತು. ಹೈ ಪವರ್ ಕಮಿಟಿ ವರದಿಯನ್ನು ಆಧರಿಸಿ 1991 ಆ ರಲ್ಲಿ ಎಚ್.ಕೆ.ಡಿ.ಬಿ. ಯನ್ನು ಪ್ರಾರಂಭಿಸಲಾಯಿತು. ಆಗ ಯಾವ ಸರ್ಕಾರ ಇತ್ತು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, 2002 ರಲ್ಲಿ ಡಾ. ಡಿ. ಎಂ ನಂಜುಂಡಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ವರದಿ ಪಡೆದಿದ್ದೆವು. ಸದರಿ ವರದಿಯನ್ನು ಆಧರಿಸಿ ಸುಮಾರು 35000 ಕೋಟಿ ರೂಗಳಿಗಿಂತ ಹೆಚ್ಚಿನ ಅನುದಾನಗಳನ್ನು ಅತ್ಯಂತ ಹಿಂದುಳಿದ, ಅತಿ ಹಿಂದುಳಿದ ಹಾಗೂ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗಾಗಿ ಖರ್ಚು ಮಾಡಿದ್ದೇವೆ. 2002 ರಲ್ಲಿ ಯಾವ ಸರ್ಕಾರವಿತ್ತು ಎಂದು ಕೇಳಿದರು.

ವಾಜಪೇಯಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಆರ್ಟಿಕಲ್ 371 ಜೆ ಕೊಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದಲ್ಲಿ 6-11-2013 ರಂದು ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಿಶೇಷ ಸ್ಥಾನಮಾನದ 371 ಜೆ ಅನುಷ್ಠಾನ ಮಾಡಲಾಯಿತು. 371 ಜೆ ಅನುಷ್ಠಾನವಾದ ಮೇಲೆ ಆ ಭಾಗದ ಅಭಿವೃದ್ಧಿಗಾಗಿ 24,778 ಕೋಟಿ ರೂಗಳನ್ನು ಒದಗಿಸಿದ್ದೇವೆ. ಇದುವರೆಗೆ ಸುಮಾರು 14,800 ಕೋಟಿ ರೂ ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

371 ಜೆ ಸ್ಥಾನಮಾನ ದೊರೆತ ನಂತರ ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇನ್ನಿತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70 ರಷ್ಟು ಸ್ಥಾನಗಳನ್ನು ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇ.8 ರಷ್ಟು ಸ್ಥಾನಗಳನ್ನು ಈ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರ ಪರಿಣಾಮ 2014-15 ರಿಂದ 2024 ರ ಶೈಕ್ಷಣಿಕ ಸಾಲಿನವರೆಗೆ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಜಿನಿಯರಿAಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಇದಲ್ಲದೆ 12,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಂತ ವೈದ್ಯಕೀಯ, ಹೋಮಿಯೋಪತಿ, ಕೃಷಿ ಸಂಬAಧಿತ, ಬಿ-ಫಾರ್ಮಸಿ/ ಡಿ-ಫಾರ್ಮಸಿ ಕೋರ್ಸುಗಳು ಮುಂತಾದವುಗಳಿಗೆ ಮೀಸಲಾತಿ ಸೌಲಭ್ಯದಿಂದ ಉನ್ನತ ಶಿಕ್ಷಣ ಪಡೆÀಯಲು ಸಾಧ್ಯವಾಗಿದೆ. ಈ ವರ್ಷದ ಅಂಕಿ ಅಂಶಗಳೂ ಸೇರಿದರೆ ಇನ್ನಷ್ಟು ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿರುವುದು ತಿಳಿಯುತ್ತದೆ ಎಂದು ತಿರುಗೇಟು ನೀಡಿದರು.

ಈ ಎರಡೂ ವರದಿಗಳನ್ನು ಅನುಷ್ಠಾನ ಮಾಡಿದ ಮೇಲೆ ಪರಿಸ್ಥಿತಿ ಏನಾಗಿದೆಯೆಂದು ಪರಿಶೀಲಿಸುವ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಅರ್ಥಶಾಸ್ತçಜ್ಞರುಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದೇವೆ. ಸದರಿ ಸಮಿತಿಯು ಸದ್ಯದಲ್ಲಿಯೆ ವರದಿ ಸಲ್ಲಿಸಲಿದೆ. ಆ ವರದಿ ಬಂದ ಕೂಡಲೆ ನಾವು ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ನಮ್ಮ ಬಿ.ಆರ್ ಪಾಟೀಲರಾದಿಯಾಗಿ ಅನೇಕ ಸದಸ್ಯರು ಶಿಕ್ಷಣದ ಬಗ್ಗೆ ಮಾತನಾಡಿದ್ದಾರೆ. ನಮಗೂ ಈ ಕುರಿತು ಕಾಳಜಿಯಿದೆ. ಕಲ್ಯಾಣ ಕರ್ನಾಟಕದ ಶಿಕ್ಷಣ ಪರಿಸ್ಥಿತಿಯನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಲು ಶಿಕ್ಷಣ ತಜ್ಞರಾದ ಛಾಯಾ ದೇಗಾಂವಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದೇವೆ. ಸದರಿ ಸಮಿತಿಯು ವರದಿ ಸಲ್ಲಿಸಲು ಸಮಯ ಕೇಳಿದ್ದಾರೆ. ಕೂಡಲೇ ವರದಿ ಸ್ವೀಕರಿಸಿ ಸಾಧಕ ಬಾಧಕ ಪರಿಶೀಲಿಸಿ ಅನುಷ್ಠಾನ ಮಾಡಲಾಗುವುದು ಎಂದು
ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *