Home ದಾವಣಗೆರೆ ರೈತರಿಗೆ 7 ಗಂಟೆ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ಒದಗಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ದಾವಣಗೆರೆನವದೆಹಲಿಬೆಂಗಳೂರು

ರೈತರಿಗೆ 7 ಗಂಟೆ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ಒದಗಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

Share
Share

SUDDIKSHANA KANNADA NEWS/DAVANAGERE/DATE:11_12_2025

ಬೆಳಗಾವಿ: ನೀರಾವರಿಗೆ ವಿದ್ಯುತ್‌ ಸಮಸ್ಯೆಯಿದ್ದು, 12 ತಾಸು ನಿರಂತರ ವಿದ್ಯುತ್‌ ಪೂರೈಕೆ ಖಾತ್ರಿಪಡಿಸಬೇಕು. ಅಕ್ರಮ ಸಕ್ರಮ ಯೋಜನೆಯನ್ನು ಪುನಾರಂಭಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಡುಪ್ರಾಣಿಗಳಿಂದ ಬೆಳೆ ಹಾನಿ ಪರಿಹಾರ ಧನ ಹೆಚ್ಚಿಸಬೇಕು. ರೈತರ ಉತ್ಪನ್ನಗಳ ಖರೀದಿಗೆ ಕಾರ್ಪಸ್‌ ಫಂಡ್‌ ಆರಂಭಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಪಶು ವೈದ್ಯರ ನೇಮಕ ಮಾಡಬೇಕು. ಬೆಳಗಾವಿಯಲ್ಲಿ ಆರಂಭಿಸಲಾಗಿರುವ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ರೈತ ಪ್ರತಿನಿಧಿಗಳು ಮನವಿ ಸಲ್ಲಿಸಿದ ಬಳಿಕ ಭರವಸೆ
ನೀಡಿದರು.

ರೈತರಿಗೆ 7ಗಂಟೆ ಕಾಲ ನಿರಂತರ ಗುಣಮಟ್ಟದ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧವಾಗಿದೆ. ವಿದ್ಯುತ್‌ ಉತ್ಪಾದನೆ ಹೆಚ್ಚಾದಾಗ ವಿದ್ಯುತ್‌ ಪೂರೈಕೆ ಹೆಚ್ಚಿಸಲು ಕ್ರಮ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ರೈತರ ವಿಷಯದಲ್ಲಿ ಸರ್ಕಾರ ಯಾವುದೇ ಆತ್ಮವಂಚನೆ ಮಾಡುವುದಿಲ್ಲ ಎಂದು ಹೇಳಿದರು.

ನಮ್ಮ ಸರ್ಕಾರ ರೈತ ಪರ, ಎಲ್ಲಾ ಸಮಸ್ಯೆಗಳಿಗೂ ನ್ಯಾಯಯುತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles