Site icon Kannada News-suddikshana

ಸರ್ಕಾರಿ ಸಿಬ್ಬಂದಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪಬೇಕು: ಕೇಂದ್ರ ಸರ್ಕಾರ ಖಡಕ್​​​ ಆದೇಶ

ದೆಹಲಿ: ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್​​​ ಆದೇಶವೊಂದನ್ನು ನೀಡಿದೆ. ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ.

ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ನೌಕರರು ತಮ್ಮ ಕಚೇರಿಗಳಿಗೆ ಬೆಳಗ್ಗೆ 9:15 ಕ್ಕೆ ತಲುಪಬೇಕು ಹಾಗೂ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಹಾಜರಾತಿಯನ್ನು ಹಾಕಬೇಕು ಎಂದು ಸೂಚಿಸಿದೆ. ಸಿಬ್ಬಂದಿಗಳು ಒಂದು ವೇಳೆ ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು(CL) ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದೆ.

ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ರವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳು ಕಚೇರಿಗೆ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವವರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದನ್ನು ತಡೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

Exit mobile version