ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹೆಚ್. ಡಿ. ದೇವೇಗೌಡರ ಪ್ರಯತ್ನಕ್ಕೆ ಸರ್ಕಾರದ ಸಂಪೂರ್ಣ ಬೆಂಬಲ: ಸಿಎಂ ಸಿದ್ದರಾಮಯ್ಯ!

On: February 16, 2025 11:38 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-02-2025

ಬೆಂಗಳೂರು: ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ‍್ಳುತ್ತಿದ್ದೇನೆ ಎಂದಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.

ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಕಿಡಿಕಾರಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment