ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

On: January 14, 2025 11:15 AM
Follow Us:
---Advertisement---
SUDDIKSHANA KANNADA NEWS/ DAVANAGERE/ DATE:14-01-2025
ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಭದ್ರಾವತಿ ತಾಲೂಕಿನ ಕಲ್ಲಹಳ್ಳಿ, ಹೊಸನಗರ ತಾಲೂಕಿನ ಚಿಕ್ಕಜೇನಿ, ಸಾಗರ ತಾಲೂಕಿನ ಖಂಡಿಕ, ಆವಿನಹಳ್ಳಿ ಮತ್ತು ಹಿರೇನೆಲ್ಲೂರು, ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ, ಕೊರಟಿಗೆರೆ, ಶಿವಮೊಗ್ಗ ತಾಲೂಕಿನ ಸೋಗಾನೆ, ತೀರ್ಥಹಳ್ಳಿ ತಾಲೂಕಿನ ನಾಲೂರು (ಕೊಲಗಿ), ಬಸವಾನಿ, ದೇಮ್ಲಾಪುರ, ಅರಗ, ಮುಳಬಾಗಿಲು ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಅರ್ಜಿಗಳನ್ನು https://www.karnatakaone.gov.in/…/GramaOneFranchisee1crms ರಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment