ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯ: ಮಹತ್ವದ ಮಾಹಿತಿ ಇಲ್ಲಿದೆ ನೋಡಿ

On: October 20, 2025 11:19 AM
Follow Us:
ಇ-ಸ್ವತ್ತು
---Advertisement---

SUDDIKSHANA KANNADA NEWS/DAVANAGERE/DATE:20_10_2025

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

READ ALSO THIS STORY: 2029ರಲ್ಲಿಯೂ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ: ಜ್ಯೋತಿಷಿ ಜೈ ಮದನ್ ಸ್ಫೋಟಕ ಭವಿಷ್ಯ!

ಗ್ರಾಮ ಪಂಚಾಯತಿಯ ಎಲ್ಲ ಆಸ್ತಿಗಳ ಕರಡು ಪ್ರತಿಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕ ಒದಗಿಸಿ ತಮ್ಮ ಆಸ್ತಿಗಳ ಮಾಹಿತಿಯನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಗ್ರಾಮ ಪಂಚಾಯತಿಗೆ ಪಾವತಿಸುವ ಮೂಲಕ ದಾಖಲೆ ಪಡೆಯಲು ಹಾಗೂ ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ಧಿಗೊಳಿಸುವುದರ ಮೂಲಕ ಗ್ರಾಮ ಪಂಚಾಯತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಲಿದೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧಾರ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ (ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ತೆರಿಗೆ, ದರ ಹಾಗೂ ಶುಲ್ಕಗಳನ್ನು ನಿಗದಿ ಮಾಡುವುದರಿಂದ ಮತ್ತು ಪರವಾನಗಿ, ನಿರಾಕ್ಷೇಪಣ ಪತ್ರಗಳನ್ನು ಕ್ರಮಬದ್ಧವಾಗಿ ಮತ್ತು ಕಾಲಮಿತಿಯೊಳಗೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ನೀಡುವುದರಿಂದ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲದ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ, ಸ್ವಯಂ ಸರ್ಕಾರಗಳಾಗಿ ಗ್ರಾಮ ಪಂಚಾಯತಿಗಳು ತಮ್ಮ ಅಭಿವೃದ್ಧಿಯನ್ನು ತಾವೇ ನಿರ್ಧರಿಸುವ ದಿಸೆಯಲ್ಲಿ ಇದೊಂದು ಮಹತ್ತರ ಹಾಗೂ ಐತಿಹಾಸಿಕ ನಡೆಯಾಗಿದೆ.

ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಾಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ‘ಎಲ್ಲ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದು’ ಎಂದು ಘೋಷಿಸಲಾಗಿತ್ತು.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199 (ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ. ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿದ್ದರಾಮಯ್ಯ

ಆರ್ ಎಸ್ .ಎಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

ರಾಹುಲ್ ಗಾಂಧಿ

“ಬೇಗ ಮದುವೆಯಾಗಿ, ಸಿಹಿತಿಂಡಿ ಆರ್ಡರ್ ಕೊಡ್ತಿರೆಂದು ಕಾಯ್ತಿದ್ದೇವೆ: ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಸಿಹಿತಿಂಡಿ ತಿನಿಸು ಮಾಲೀಕ!

ಪ್ರಿಯಾಂಕ್ ಖರ್ಗೆ

ಸರ್ಕಾರಿ ನೌಕರರು ಸಂಘಟನೆ, ಪಕ್ಷದ ಸದಸ್ಯರಂತಿರಬಾರದು, ಬಿಜೆಪಿ ಸಂಸದರೇ ಉಲ್ಲಂಘಿಸುವರ ಸಮರ್ಥನೆ ಎಷ್ಟು ಸರಿ: ಪ್ರಿಯಾಂಕ್ ಖರ್ಗೆ

ಜುಬಿಲಿ ಹಿಲ್ಸ್

ಜುಬಿಲಿ ಹಿಲ್ಸ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸೈಯದ್ ಖಾಲಿದ್ ಅಹ್ಮದ್ ಮನೆ ಮನೆಗೆ ತೆರಳಿ ಮತಯಾಚನೆ

ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಳ್ಳುವ ಬದಲು ರೈತರೇ ಶಾಸಕರ ಕೊಂದು ಹಾಕಿ: ಮಾಜಿ ಸಚಿವನ ವಿಚಿತ್ರ ಸಲಹೆ!

ನರೇಂದ್ರ ಮೋದಿ

ಪಾಕಿಸ್ತಾನಕ್ಕೆ ಐಎನ್ಎಸ್ ವಿಕ್ರಾಂತ್ ನಿದ್ದೆಯಿಲ್ಲದ ರಾತ್ರಿಗಳನ್ನು ಕೊಟ್ಟಿತು: ದೀಪಾವಳಿಯಂದು ನೌಕಾಪಡೆಗೆ ನರೇಂದ್ರ ಮೋದಿ ಬಹುಪರಾಕ್!

Leave a Comment