ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಿವಣ್ಣ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಭರ್ಜರಿ ಗುಡ್​​ನ್ಯೂಸ್

On: January 1, 2025 7:32 PM
Follow Us:
---Advertisement---

ಆರೋಗ್ಯ ಕುರಿತು ಮಾಹಿತಿ ನೀಡಿರುವ ಶಿವಣ್ಣ ದಂಪತಿ
ಅಮೆರಿಕದಲ್ಲಿ ಸರ್ಜರಿಗೆ ಒಳಗಾಗಿದ್ದ ಶಿವರಾಜ್​ ಕುಮಾರ್
ಶಿವಣ್ಣ ಅವರ ಆರೋಗ್ಯ ಕುರಿತು ಬಿಗ್ ಅಪ್​ಡೇಟ್ಸ್ ಇಲ್ಲಿದೆ

ಡಾ.ಶಿವರಾಜ್​ ಕುಮಾರ್ ಅವರು ಅಮೆರಿಕದಲ್ಲಿ ಈಗಾಗಲೇ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾರೆ. ಆದರೆ ಅಮೆರಿಕದಲ್ಲಿ ಶಿವಣ್ಣ ಹೇಗಿದ್ದಾರೆ ಎನ್ನುವುದು ಅವರ ಅಭಿಮಾನಿಗಳನ್ನ ಕಾಡುತ್ತಿತ್ತು. ಸದ್ಯ ಈ ಸಂಬಂಧ ಅಮೆರಿಕದಿಂದ ಶಿವಣ್ಣ ಅವರ ಆರೋಗ್ಯ ಕುರಿತು ಬಿಗ್ ಅಪ್​ಡೇಟ್ಸ್​ ಅನ್ನು ಕೊಡಲಾಗಿದೆ.
ಸರ್ಜರಿ ಕುರಿತು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣ ದಂಪತಿ ಮಾತನಾಡಿದ್ದಾರೆ. ವಿಡಿಯೋದಲ್ಲಿ ಗೀತಾ ಶಿವರಾಜ್​ ಕುಮಾರ್ ಅವರು ಮಾತನಾಡಿ, ಮೊದಲು ಎಲ್ಲ ಕನ್ನಡಿಗರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ತಿಳಿಸಿದ್ದಾರೆ. ನೀವೆಲ್ಲ ಮಾಡಿದ ಆಶೀರ್ವಾದದಿಂದ ಎಲ್ಲ ರಿಪೋರ್ಟ್​​ಗಳು ನೆಗೆಟಿವ್ ಬಂದಿವೆ. ಕೊನೆಯಲ್ಲಿ ಪೈಥೋಲಾಜಿ ರಿಪೋರ್ಟ್​ ಬಗ್ಗೆ ಕಾಯುತ್ತಿದ್ದೇವು. ಅದು ಕೂಡ ನೆಗೆಟಿವ್ ಬಂದಿದ್ದು ಶಿವರಾಜ್​ ಕುಮಾರ್ ಅವರು ಕ್ಯಾನ್ಸರ್​ ಫ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ.

ಆಸ್ಪತ್ರೆಯವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಇದಕ್ಕೆಲ್ಲ ಕಾರಣ ದೊಡ್ಡವರ ಹಾಗೂ ನಿಮ್ಮೆಲ್ಲರ ಆಶೀರ್ವಾದವಾಗಿದೆ. ನಾನು ಇದನ್ನು ನನ್ನ ಜೀವನದಲ್ಲಿ ಯಾವತ್ತೂ ಮರೆಯುವುದಿಲ್ಲ ಅಂತ ಗೀತಾ ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ. ಗೀತಕ್ಕ ಮಾತನಾಡುವಾಗ ಶಿವರಾಜ್​ ಕುಮಾರ್ ಅವರು ಪಕ್ಕದಲ್ಲೇ ಕುಳಿತುಕೊಂಡಿದ್ದರು. ಅವರು ಮಾತನಾಡಿ ನಿಮ್ಮ ಆಶೀರ್ವಾದಿಂದ ಆರೋಗ್ಯವಾಗಿದ್ದೇನೆ ಎಂದಿದ್ದಾರೆ

Join WhatsApp

Join Now

Join Telegram

Join Now

Leave a Comment