ದಾವಣಗೆರೆ: ಗೃಹಲಕ್ಷ್ಮೀ ಡಿಜಿಟಲ್ ಮಾರುಕಟ್ಟೆ ಆಪ್‌ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜ.9 ರಿಂದ ಗೃಹಲಕ್ಷ್ಮೀ ಡಿಜಿಟಲ್ ಮಾರುಕಟ್ಟೆ ಆಪ್ ಬಿಡುಗಡೆ ಮಾಡಲಾಗಿದೆ.
ಇದರಲ್ಲಿ ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಮತ್ತು ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕಾಸಿಯಾ ಘಟಕಗಳ ಮಹಿಳಾ ಉದ್ಯಮಿಗಳು, ಧರ್ಮಸ್ಥಳ ಸಂಸ್ಥೆ ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ಈ ಸೌಲಭ್ಯ ಪಡೆಯಬಹುದು.
ಆಸಕ್ತ ಮಹಿಳೆಯರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಜಿಲ್ಲೆಯ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಮ್.ಸಿ.ಸಿ ‘ಬಿ’ ಬ್ಲಾಕ್, ಕುವೆಂಪು ನಗರ, ದಾವಣಗೆರೆ ಇಲ್ಲಿ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ನೀಡಬೇಕೆಂದು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.





Leave a comment