ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Gruhalakshmi ಎಫೆಕ್ಟ್: ಹೊಸ ಬಿಪಿಎಲ್ ಕಾರ್ಡ್ ಗಿಲ್ಲ ಪರ್ಮಿಷನ್, ತಿದ್ದುಪಡಿಗಷ್ಟೇ ಗ್ರೀನ್ ಸಿಗ್ನಲ್.. ಯಾಕೆ ಅನ್ನೋದಕ್ಕೆ ಇಲ್ಲಿದೆ ನೋಡಿ ಕಾರಣ…!

On: September 1, 2023 5:17 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-09-2023

ಬೆಂಗಳೂರು/ ದಾವಣಗೆರೆ: ಬಿಪಿಎಲ್ ಕಾರ್ಡ್ ಹೊಸದಾಗಿ ಪಡೆಯಬೇಕು ಎಂದುಕೊಂಡಿದ್ದೀರಾ. ಹಾಗಿದ್ರೆ ನಿಮಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಯಾಕೆಂದರೆ ರಾಜ್ಯ ಸರ್ಕಾರವು ಹೊಸ ಕಾರ್ಡ್ ಗೆ ಅನುಮತಿ ಕೊಟ್ಟಿಲ್ಲ. ಕೇವಲ ತಿದ್ದುಪಡಿಗೆ ಮಾತ್ರ ಓಕೆ ಎಂದಿದೆ. ಇದು ಗೃಹಲಕ್ಷ್ಮಿ (GRUHALAKSHMI) ಯೋಜನೆ ಎಫೆಕ್ಟ್.

ಈಗಾಗಲೇ ಗೃಹಜ್ಯೋತಿ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ಕೊಟ್ಟಿದೆ. ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮದ ಮೂಲಕ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂಪಾಯಿ
ಅಕೌಂಟ್ ಗೆ ಹಾಕುವ ಕಾರ್ಯ ನಡೆಯುತ್ತಿದೆ. ಕೆಲವರಿಗೆ ಮೆಸೇಜ್ ಬಂದಿದ್ದರೆ ಮತ್ತೆ ಕೆಲವರಿಗೆ ಬಂದಿಲ್ಲ. ಮುಂಬರುವ ದಿನಗಳಲ್ಲಿ ಅಕೌಂಟ್ ಗೆ ಹಣ ಬರಲಿದೆ.

ಈ ಸುದ್ದಿಯನ್ನೂ ಓದಿ: 

DEVARABELAKERE DAM: ಸೌಂದರ್ಯದ ಖನಿ ಹರಿಹರದ ದೇವರಬೆಳಕೆರೆ ಪಿಕಪ್ ಡ್ಯಾಂ ಕಾಲುವೆಗಳ ಹೂಳು ನೋಡಬನ್ನಿ…! ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ನಂದಿಗಾವಿ ಶ್ರೀನಿವಾಸ್

ಆದ್ರೆ, ಬಿಪಿಎಲ್ ಕಾರ್ಡ್ ಪಡೆಯಲು ಹಲವರು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಸರ್ಕಾರ ಇದಕ್ಕೆ ಅನುಮತಿ ಕೊಟ್ಟಿಲ್ಲ. ಕೇವಲ ತಿದ್ದುಪಡಿಗಳಿಗೆ ಮಾತ್ರ ಹಸಿರುನಿಶಾನೆ ತೋರಿದೆ. ಮನೆಯೊಡತಿ ಹೆಸರು ಬದಲಾವಣೆಗೆ ಸೆಪ್ಟೆಂಬರ್​ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬೇಕು.

ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಯಾವಾಗ ಅನುಮತಿ ಕೊಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳು ಸಹ ಸ್ಪಷ್ಟ ಮಾಹಿತಿ ಕೊಡುತ್ತಿಲ್ಲ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ವಿಲೇವಾರಿ ಆಗದಿರುವುದರಿಂದ ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಆಗಿದೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳ ಫಲ ಪಡೆಯಲು ಬಿಪಿಎಲ್ ಕಾರ್ಡ್ ಗಾಗಿ ಜನರು ಕಚೇರಿಗೆ ಪದೇ ಪದೇ ಹೋಗಿ ಬರುತ್ತಿದ್ದಾರೆ.

ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ಕಾರ್ಡ್​ನ ಮುಖ್ಯಸ್ಥರು ಪುರುಷಾರಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಸ್ಕೀಂ ಸಿಗಲ್ಲ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಯೋಜನೆಗೂ ಅನರ್ಹರು. ಅಲ್ಲದೇ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದ್ರೆ ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸಾಗಿದ್ದರೆ ಅಂತವರಿಗೆ ಅನ್ನಭಾಗ್ಯ ಸ್ಕೀಂ ಸಿಗಲ್ಲ. ಹೀಗಾಗಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ನೀಡಲಾಗಿದೆ.

ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ (Gruha lakshmi scheme) ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟಂಬರ್ ಒಂದರಿಂದ ಅವಕಾಶ ಕೊಟ್ಟಿದೆ.

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರುವ ಕಾರ್ಡ್ ನಿಂದ ಅರ್ಜಿ ಸಲ್ಲಿಸಲು ಬರಲ್ಲ. ಅಲ್ಲದೇ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ ಎರಡು ಸಾವಿರ ಹಣ ಸಿಗದಂತಾಗಿದೆ.

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರುವ ಕಾರ್ಡ್ ನಿಂದ ಅರ್ಜಿ ಸಲ್ಲಿಸಲು ಬರಲ್ಲ. ಅಲ್ಲದೇ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ ಎರಡು ಸಾವಿರ ದುಡ್ಡು ಸಿಗದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಮನೆಯೊಡತಿ ಹೆಸರು ಬದಲಾವಣೆಗೆ ಸೆಪ್ಟೆಂಬರ್​ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬೇಕು.

 

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment