Home ದಾವಣಗೆರೆ ಗೃಹಲಕ್ಷ್ಮಿ ಶಾಕ್: ಒಂದೇ ಮನೆಯಲ್ಲಿ 3 ಯಜಮಾನಿಯರಿದ್ದರೆ ಗ್ಯಾರಂಟಿ ಕಟ್? ಡಿ.ಕೆ. ಶಿವಕುಮಾರ್!
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ಗೃಹಲಕ್ಷ್ಮಿ ಶಾಕ್: ಒಂದೇ ಮನೆಯಲ್ಲಿ 3 ಯಜಮಾನಿಯರಿದ್ದರೆ ಗ್ಯಾರಂಟಿ ಕಟ್? ಡಿ.ಕೆ. ಶಿವಕುಮಾರ್!

Share
ಡಿ.ಕೆ. ಶಿವಕುಮಾರ್
Share

ಬೆಂಗಳೂರು: “ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿರುವವರು ಮನೆಯ ನಿಜವಾದ ಯಜಮಾನಿಯೇ ಎಂದು ತಿಳಿದುಕೊಳ್ಳಬೇಕಲ್ಲವೇ? ಒಂದು ಮನೆಗೆ ಒಬ್ಬರು ಮನೆ ಯಜಮಾನಿಯರನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದೇ ‘
ಮನೆಯಲ್ಲಿ ಇಬ್ಬರು ಮೂವರು ಯಜಮಾನಿಯರಿದ್ದಾರೆ ಅದನ್ನು ಪರಿಶೀಲನೆ ಮಾಡುತ್ತೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳೊಂದಿಗೆ 7 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಶನಿವಾರ ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸುವ ಬಗ್ಗೆ ಕೇಳಿದಾಗ, “ಈ ಯೋಜನೆ ಲಾಭ ಪಡೆಯುತ್ತಿರುವವರ ಬಗ್ಗೆ ಸಮರ್ಪಕ ಮಾಹಿತಿ ಬೇಕಲ್ಲವೇ ಎಂದು ಪ್ರಶ್ನಿಸಿದರು.

ಗ್ರಾಮೀಣ ಭಾಗದ ಶಿಕ್ಷಣಕ್ಕೆ ಸಿಎಸ್ಆರ್ ನಿಧಿ ಬಳಕೆಗೆ ನೀತಿ ರಚನೆ

“ನಾವು ನೂತನ ಸಿಎಸ್ಆರ್ ನೀತಿ ತರುತ್ತಿದ್ದೇವೆ. ಕಂಪನಿಗಳು ತಮ್ಮ ವಾರ್ಷಿಕ ಆದಾಯದ 2% ಹಣವನ್ನು ಸಿಎಸ್ಆರ್ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬ ನಿರ್ದೇಶನವಿದೆ. ಈ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ನಿರ್ಮಾಣಕ್ಕೆ ಬಳಸಲು ತೀರ್ಮಾನಿಸಲಾಗಿದೆ. ಹಳ್ಳಿಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಮೂಲಸೌಕರ್ಯ ಒದಗಿಸಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳು ಈ ಗ್ರಾಮೀಣ ಭಾಗದ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ನಗರ ಪ್ರದೇಶದಲ್ಲಿ ಸಿಗುವ ಶಿಕ್ಷಣ, ಸಿಗುವಂತೆ ಮಾಡಬೇಕು. ನಮ್ಮ ಜಿಲ್ಲೆಯಲ್ಲಿ 20 ಶಾಲೆಗಳನ್ನು ನಿರ್ಮಿಸಲು ಮುಂದಾಗಿದ್ದೇವೆ. ಕಂಪನಿಗಳು ತಮ್ಮ ಸಿಎಸ್ಆರ್ ನಿಧಿಯ ಹಣವನ್ನು ಸರ್ಕಾರಕ್ಕೆ ನೀಡುವುದು ಬೇಡ, ಸರ್ಕಾರ ನೀಡುವ ಮಾದರಿಯಲ್ಲಿ ಶಾಲೆಗಳನ್ನು ನಿರ್ಮಿಸಿಕೊಟ್ಟರೆ ಸಾಕು. ಇದು ಸಂಪೂರ್ಣ ಸರ್ಕಾರಿ ಶಾಲೆಯಾಗಿರುತ್ತವೆ” ಎಂದರು.

Share

Leave a comment

Leave a Reply

Your email address will not be published. Required fields are marked *