ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದ ಮಹಿಳೆಯರಿಗೆ ಬಂಪರ್ ಆಫರ್ : ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ- ಲಕ್ಷ್ಮೀ ಹೆಬ್ಬಾಳ್ಕರ್​

On: September 2, 2024 3:46 PM
Follow Us:
---Advertisement---

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ.

ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್​ಗಳು ಹೆಚ್ಚಿನ ವೀಕ್ಷಣೆಗಳನ್ನು (ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್​ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ಅವರು ಉಲ್ಲೇಖಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment