Site icon Kannada News-suddikshana

ಗೃಹಿಣಿಯರಿಗೆ ಗುಡ್ ನ್ಯೂಸ್: 1 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!

(gruhalakshmi money) ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಒಂದು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ 2000 ರೂ. ವರ್ಗಾವಣೆ ಮಾಡಲಿದೆ. ಸದ್ಯ ಬಾಕಿ ಇರುವ ಇನ್ನೆರಡು ತಿಂಗಳ ಹಣ ಖಾತೆ ಸೇರುವುದು ವಿಳಂಬವಾಗಲಿದೆ. ಸದ್ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗಳಿಗೆ ವರ್ಗಾವಣೆಯಾಗುವುದು ಬಾಕಿ ಉಳಿದಿದೆ ಎಂದು ತಿಳಿಸಿದ್ದಾರೆ.

ಸದ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಈಗಾಗಲೇ ಜುಲೈ ತಿಂಗಳ ಹಣಕ್ಕೆ ಪತ್ರ ಬರೆಯಲಾಗಿದೆ. ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಜುಲೈ ತಿಂಗಳ ಹಣ ಬರುವುದು ತಡವಾಗಲಿದೆ. ಸರ್ಕಾರ ನಮಗೆ ಬೇಗ ಕೊಟ್ಟರೆ ನಾವು ಖಾತೆಗಳಿಗೆ ವರ್ಗಾವಣೆ ಮಾಡುತ್ತೇವೆ. ಆದರೆ, ಸರ್ಕಾರದಿಂದ ಹಣ ಬಿಡುಗಡೆ ಮಾಡುವುದು ತಡವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Exit mobile version