ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ʻಗೃಹಲಕ್ಷ್ಮಿʼ 11ನೇ ಕಂತಿನ ಹಣ ಖಾತೆಗೆ ಜಮಾ

On: June 16, 2024 9:29 AM
Follow Us:
---Advertisement---

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿತಿಂಗಳು 2,000 ರೂ. ನೀಡಲಾಗುತ್ತಿದ್ದು, ಇದೀಗ 11 ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಎರಡ್ಮೂರು ದಿನಗಳಲ್ಲಿ ಜಮೆ ಆಗಲಿದೆ.

ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್ ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ 11 ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

 

Join WhatsApp

Join Now

Join Telegram

Join Now

Leave a Comment