Site icon Kannada News-suddikshana

ಯಜಮಾನಿಯರೇ ಗಮನಿಸಿ :ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ನೀಡಲಾಗುತ್ತಿದ್ದು, ಕೆಲ ಮಹಿಳೆಯರಿಗೆ ಹಣ ಬಂದಿಲ್ಲ. ಇದುವರೆಗೂ ಗ್ಯಾರಂಟಿ ಹಣ ಬಾರದೇ ಇರುವ ಗೃಹಲಕ್ಷ್ಮಿ ಫಲಾನುಭವಿಗಳು ತಪ್ಪದೆ ಈ ಕೆಲಸ ಮಾಡಿದ್ರೆ ಮಾತ್ರ ಗೃಹಲಕ್ಷ್ಮಿ ಹಣ ಬರುತ್ತದೆ. ಹಾಗಾದರೆ ಏನದು? ಇಲ್ಲಿದೆ ನೋಡಿ.

ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ:
* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೀಗಾಗಿ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ ಎಸ್‌ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.

ಈ ರೀತಿ ಮಾಡಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮ್ಮ ಖಾತೆಗೆ ಬರಲಿದೆ.

Exit mobile version