(gruhalakshmi money:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಇನ್ಮುಂದೆ ಇಂತಹ ಮಹಿಳೆಯರಿಗೆ ಬರಲ್ಲ. ಹೌದು, ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಂಡ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಣ ಸ್ಥಗಿತವಾಗಲಿದೆ ಎನ್ನಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ರೂಲ್ಸ್:
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಬಿದ್ದಿದ್ದು, ಕೆಲ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗೋದಿಲ್ಲ. ರಾಜ್ಯಾದ್ಯಂತ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೇ ರೀತಿ ಮೃತ ಸದಸ್ಯರ ಹೆಸರು ಕೂಡ ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿದ್ದು, ಬಿಪಿಎಲ್ ಕಾರ್ಡ್ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.