ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇನ್ಮುಂದೆ ಈ ದಿನದೊಳಗೆ ಗೃಹಲಕ್ಷ್ಮಿ ಹಣ ಜಮಾ; ಸರ್ಕಾರದಿಂದ ಬಿಗ್ ಅಪ್ಡೇಟ್

On: July 15, 2024 3:19 PM
Follow Us:
---Advertisement---

(Gruha lakshmi Money) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದು, ಇನ್ಮುಂದೆ ಹಣ ಜಮಾ ಕುರಿತು ಸರ್ಕಾರದಿಂದ ಬಿಗ್ ಅಪ್ಡೇಟ್ ನೀಡಿದೆ.

ಹೌದು, ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ, ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕದಲ್ಲಿರುವ ಕುಟುಂಬಗಳ ಪೈಕಿ ಶೇ.98 ರಷ್ಟು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬಾಕಿ ಇರುವ 11 ನೇ ಕಂತಿನ ಹಣ ಜುಲೈ 15 ರೊಳಗೆ ಪಾವತಿಯಾಗಲಿದೆ. ಅಷ್ಟೇ ಅಲ್ಲದೇ ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC, ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.

Join WhatsApp

Join Now

Join Telegram

Join Now

Leave a Comment