SUDDIKSHANA KANNADA NEWS/ DAVANAGERE/ DATE:11-11-2024
ಚನ್ನಪಟ್ಟಣ: ಗ್ಯಾರಂಟಿಗಳನ್ನು ನಿಲ್ಸಲ್ಲ-ನಿಲ್ಸಲ್ಲ-ನಿಲ್ಸಲ್ಲ, ಗ್ಯಾರಂಟಿಗಳನ್ನು ನಿಲ್ಸಲ್ಲ,
ಇದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನೀಡಿದ ಸ್ಪಷ್ಟೋಕ್ತಿ. ಚನ್ನಪಟ್ಟಣದ ದೊಡ್ಡ ಮಳೂರಿನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ ಪರ ಪ್ರಚಾರ ನಡೆಸಿದ ವೇಳೆ ಸಿದ್ದರಾಮಯ್ಯರು ಹೇಳಿದ ಮಾತು.
ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ
ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ ಎಂದು ಘೋಷಿಸಿದರು.
ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.