SUDDIKSHANA KANNADA NEWS/ DAVANAGERE/ DATE:19-10-2023
ಬೆಂಗಳೂರು (Bangalore): ಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಘೋಷಣೆ ಮಾಡಿರುವ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು, ಘಟಕದ ರಾಜ್ಯಾಧ್ಯಕ್ಷರಾಗಿ ಹೆಚ್. ಡಿ. ಕುಮಾರಸ್ವಾಮಿ ಅವರ ಹೆಸರು ಘೋಷಿಸಿದ್ದಾರೆ. ಈ ಮೂಲಕ ಸಿ. ಎಂ. ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಕೆಲವು ಪದಾಧಿಕಾರಿಗಳನ್ನು ವಿಸರ್ಜನೆ ಮಾಡಲಾಗಿದೆ.
Read Also This Story:
Bangalore: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಯಾವುದೇ ವೈಮನಸ್ಸು, ಕಿರಿಕಿರಿ ಇಲ್ಲ ನನ್ನ ಮೌನ ವೀಕ್ನೇಸ್ ಅಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಸಿ. ಎಂ. ಇಬ್ರಾಹಿಂಗೆ ಶಾಕ್ ಕೊಟ್ಟಿರುವ ದಳಪತಿಗಳು ಕೋರ್ ಕಮಿಟಿ ಸಭೆ ನಡೆಸಿ, ಈ ನಿರ್ಧಾರಕ್ಕೆ ಬರಲಾಗಿದೆ. ಸಿ. ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿಲ್ಲ, ಆದ್ರೆ, ರಾಜ್ಯ ಘಟಕ ವಿಸರ್ಜನೆ ಮಾಡಲಾಗಿದೆ. ಸಿ. ಇಂ. ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸಿ, ಕುಮಾರಸ್ವಾಮಿ ಅವರನ್ನು ತಾತ್ಕಾಲಿಕವಾಗಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ ಎಂದು ದೇವೇಗೌಡರು ಸಭೆ ಬಳಿಕ ತಿಳಿಸಿದರು.
ಸಿ. ಎಂ. ಇಬ್ರಾಹಿಂ ಅವರು ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದಿದ್ರು. ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಲೋಕಸಭೆಗೆ ಮೈತ್ರಿಗೆ ಅಸ್ತು ಎನ್ನುತ್ತಿದ್ದಂತೆ ಕೆಂಡಕಾರಿದ್ದ ಇಬ್ರಾಹಿಂ ಅವರು ದಳಪತಿ ವಿರುದ್ಧ ಬೆಂಕಿಯುಗುಳಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ ಅವರದ್ದೇ ಒರಿಜಿನಲ್ ಅಂತಾ ಬೋರ್ಡ್ ಹಾಕಿಕೊಳ್ಳಲಿ ಎಂದು ಕಿಡಿಕಾರಿದ್ದರು. ಆದ್ರೆ, ಈಗ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಇಬ್ರಾಹಿಂಗೆ ಶಾಕ್ ಕೊಟ್ಟಿದ್ದಾರೆ.
ಇಬ್ರಾಹಿಂ ಉಚ್ಚಾಟನೆ ಮಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಘಟಕ ವಿಸರ್ಜನೆ ಮಾಡಲಾಗಿದೆ. ಈ ಮೂಲಕ ದೇವೇಗೌಡರು ರಾಜಕೀಯ ನಡೆ ಮುಂದಿಟ್ಟರು. ದೇವೇಗೌಡರು ಅಳೆದು ತೂಗಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಕಾರ್ಯಕಾರಿ ಸಮಿತಿ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆ ನಂತರದಲ್ಲಿ ನಾಲ್ಕೈದು ತಿಂಗಳ ಅವಧಿಯಲ್ಲಿ ರಾಜಕೀಯ ಘಟಕಗಳ ಬದಲಾವಣೆ ನಡೆದಿದೆ. ಹಾಗಾಗಿ, ನನಗೆ ವಹಿಸಿರುವ ಜವಾಬ್ದಾರಿ ನಿಭಾಯಿಸುತ್ತೇನೆ. 18 ಶಾಸಕರು, ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ ಎಂದು ತಿಳಿಸಿದರು.