Home ಕ್ರೈಂ ನ್ಯೂಸ್ ಪಹಲ್ಗಾಮ್ ಉಗ್ರರ ದಾಳಿ ಸಂಬಂಧ ಎನ್‌ಐಎ ಕೋರ್ಟ್‌ನಿಂದ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಸಮನ್ಸ್: ಪಾಕಿಸ್ತಾನ ಉಗ್ರ ಹಫೀಜ್ ಸಯೀದ್ ವಿರುದ್ಧ ಕಾನೂನು ಕುಣಿಕೆ ಬಿಗಿ!
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಪಹಲ್ಗಾಮ್ ಉಗ್ರರ ದಾಳಿ ಸಂಬಂಧ ಎನ್‌ಐಎ ಕೋರ್ಟ್‌ನಿಂದ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಸಮನ್ಸ್: ಪಾಕಿಸ್ತಾನ ಉಗ್ರ ಹಫೀಜ್ ಸಯೀದ್ ವಿರುದ್ಧ ಕಾನೂನು ಕುಣಿಕೆ ಬಿಗಿ!

Share
ಪಹಲ್ಗಾಮ್
Share

ನವದೆಹಲಿ: ಜಮ್ಮುವಿನ ವಿಶೇಷ ಎನ್‌ಐಎ (NIA) ನ್ಯಾಯಾಲಯವು 2025 ರ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಯ ಸ್ಥಾಪಕ ಹಫೀಜ್ ಸಯೀದ್‌ಗೆ ಸಮನ್ಸ್ ಜಾರಿಗೊಳಿಸಲು ಮುಂದಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಈ ಸಮನ್ಸ್ ತಲುಪಿಸಲಾಗುತ್ತಿದ್ದು, ಸಯೀದ್ ವಿಚಾರಣೆಗೆ ಹಾಜರಾಗದಿದ್ದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023 ರ ಸೆಕ್ಷನ್ 356 ರ ಅಡಿಯಲ್ಲಿ ಆತನ ಅನುಪಸ್ಥಿತಿಯಲ್ಲೇ  ವಿಚಾರಣೆ ಮುಂದುವರಿಯುವ ಸಾಧ್ಯತೆಯಿದೆ.

ಎನ್‌ಐಎ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಆತನನ್ನು ಮಾಸ್ಟರ್‌ಮೈಂಡ್ ಎಂದು ಹೆಸರಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *