Site icon Kannada News-suddikshana

ITI ಅಥವಾ ಡಿಪ್ಲೋಮ ಆದವರಿಗೆ ಬೆಂಗಳೂರಿನ HAL ನಲ್ಲಿ ನೇಮಕಾತಿ

ITI ಅಥವಾ ಡಿಪ್ಲೋಮ ಆದವರಿಗೆ ಬೆಂಗಳೂರಿನ HAL ನಲ್ಲಿ ನೇಮಕಾತಿ ನಡೆಯುತ್ತಿದೆ ಆಸಕ್ತರು ಅರ್ಜಿಹಾಕಿ ಇದರ ಸದುಪಯೋಗ ಪಡೆದುಕೊಳ್ಳಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಮುಂದೆ ತಿಳಿಸಿದ್ದೇವೆ ನೋಡಿ ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಅವರಿಗೂ ಅನುಕೂಲವಾಗಲಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ತಾಂತ್ರಿಕ ಅಧಿಕಾರಿಗಳು ಮತ್ತು ನಾನ್ ಎಕ್ಸಿಕ್ಯೂಟಿವ್ ಆಪರೇಟರ್‌ಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಮತ್ತು ವೆಬ್‌ಸೈಟ್‌ನಲ್ಲಿ ನಮೂದಿಸಲಾದ ಇತರ ಷರತ್ತುಗಳನ್ನು ಪೂರೈಸಬೇಕು. ಆನ್‌ಲೈನ್ ಅಪ್ಲಿಕೇಶನ್‌ಗಳಿಗೆ ಕೊನೆಯ ದಿನಾಂಕ ಜೂನ್ 12, 2024. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈಗ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು: ಡಿಪ್ಲೋಮಾ ಟೆಕ್ನಿಷಿಯನ್
ಹುದ್ದೆಗಳ ಸಂಖ್ಯೆ: 46 ಹುದ್ದೆಗಳು
ಆಪರೇಟರ್:136 ಹುದ್ದೆಗಳು
ಒಟ್ಟು ಹುದ್ದೆಗಳು:182 ಹುದ್ದೆಗಳು
ವೇತನ: ಡಿಪ್ಲೋಮಾ ಟೆಕ್ನಿಷಿಯನ್ ರೂ. 46500/-
ಆಪರೇಟರ್: ರೂ. 44500/-

ವಿದ್ಯಾರ್ಹತೆ
ಟೆಕ್ನಿಷಿಯನ್: ಅಭ್ಯರ್ಥಿಗಳು ಸಂಬಂಧಿಸಿದ ಟ್ರೇಡ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
ಆಪರೇಟರ್ : ಅಭ್ಯರ್ಥಿಗಳು ಹತ್ತನೇ ತರಗತಿ ಉತ್ತೀರ್ಣ & ನಿಗದಿಪಡಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.

ವಯೋಮಿತಿ: (01-05-2024 ಕ್ಕೆ ಸರಿಯಾಗಿ)
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು. ಗರಿಷ್ಟ ವಯೋಮಿತಿಯ ಸಡಿಲಿಕೆ ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ 03 ವರ್ಷಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷ

ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.hal-india.co.in ವೆಬ್ಸೈಟ್ ನಲ್ಲಿ ದಿನಾಂಕ 12-06-2024 ರ ಒಳಗಾಗಿ ಆನ್ಲೈನ್ ಮೂಲಕ ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-05-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 12-06-2024

Exit mobile version