SUDDIKSHANA KANNADA NEWS/ DAVANAGERE/ DATE:07-03-2025
ಬೆಂಗಳೂರು: ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರೆ, ಬಜೆಟ್ ನಲ್ಲಿ ಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ ಎಂದು ಬಿಜೆಪಿ ಕಿಡಿಕಾರಿದೆ.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮುಸ್ಲಿಮರ ಸರಳ ಮದುವೆಗೆ ₹50 ಸಾವಿರ ರೂ., ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯಕ್ಕೆ ₹150 ಕೋಟಿ, ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ₹50 ಲಕ್ಷ, ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ, KEA ಅಡಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ ಕಡಿತ, ಉಲ್ಲಾಳದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು, ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ, ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ,ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದೆ.
ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ. ಜನವಿರೋಧಿ ನೀತಿ ಅನುಸರಿಸುವ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ. ಜನವಿರೋಧಿ ನೀತಿ ಅನುಸರಿಸುವ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದ್ದಾರೆ.