• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಭಕ್ತ-ಭಕ್ತನಿಗೆ ಜಾತಿ ಇಲ್ಲ, ಎಲ್ಲ ವರ್ಗದ ಶ್ರೀಗಳ ಒಗ್ಗೂಡಿಸಿದ ಹಳೇಕುಂದವಾಡ ಸಾಮರಸ್ಯದ ಗ್ರಾಮ: ಈಶ್ವರಾನಂದಪುರಿ ಶ್ಲಾಘನೆ

Editor by Editor
February 17, 2025
in ದಾವಣಗೆರೆ
0
ಭಕ್ತ-ಭಕ್ತನಿಗೆ ಜಾತಿ ಇಲ್ಲ, ಎಲ್ಲ ವರ್ಗದ ಶ್ರೀಗಳ ಒಗ್ಗೂಡಿಸಿದ ಹಳೇಕುಂದವಾಡ ಸಾಮರಸ್ಯದ ಗ್ರಾಮ: ಈಶ್ವರಾನಂದಪುರಿ ಶ್ಲಾಘನೆ

SUDDIKSHANA KANNADA NEWS/ DAVANAGERE/ DATE:17-02-2025

ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ತಾಲೂಕಿನ ಹಳೆಕುಂದುವಾಡ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಆಂಜನೇಯ ಸ್ವಾಮಿ, ಶ್ರೀ ಬಸವೇಶ್ವರ ದೇವಸ್ಥಾನದ ಉದ್ಘಾಟನೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಂದಿನ ಮಕ್ಕಳನ್ನು ಐಎಎಎಸ್, ಕೆಎಎಸ್‌ನಂತಹ ಉನ್ನತ ಶಿಕ್ಷಣ ಹಾಗೂ ಸಂಸ್ಕಾರ ನೀಡಲು ಪಾಲಕರು ಮುಂದಾಗಬೇಕು. ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು. ದುಂದುವೆಚ್ಚ ಕಡಿಮೆ ಮಾಡಬೇಕು ಎಂದೂ ಸಲಹೆ ನೀಡಿದರು.

ಶ್ರೀಕೃಷ್ಣನು ಕನಕನಿಗೆ, ಶ್ರೀರಾಮನು ಶಬರಿಗೆ ಒಲಿದಿದ್ದು ಜಾತಿಯಿಂದಲ್ಲ, ಅವರಲ್ಲಿದ್ದ ಭಕ್ತಿಯಿಂದಾಗಿ. ಭಕ್ತಿ ಮತ್ತು ಭಕ್ತನಿಗೆ ಜಾತಿ ಇಲ್ಲ. ಎಲ್ಲ ಸ್ವಾಮೀಜಿಗಳನ್ನು, ವರ್ಗದವರನ್ನು ಒಗ್ಗೂಡಿಸಿದ ಕುಂದುವಾಡ, ಸಾಮರಸ್ಯದ ಗ್ರಾಮವಾಗಿದೆ. ಪ್ರತಿ ಗ್ರಾಮದಲ್ಲೂ ಇಂತಹ ವಾತಾವರಣ ಇರಬೇಕು ಎಂದು ಆಶಿಸಿದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ ಆಂಜನೇಯನಿಗೆ ಸೀಮಿತ ಜಾತಿಯ ಭಕ್ತರಿಲ್ಲ. ಆತ ಜಾತ್ಯತೀತ ವ್ಯಕ್ತಿ. ಭಕ್ತಿಗೆ ಹೆಸರಾದ ಆಂಜನೇಯ ಹಾಗೂ ಸಮಾನತೆಗೆ ಹೆಸರಾದ ಬಸವೇಶ್ವರರ ದೇಗುಲ ಪ್ರತಿಷ್ಠಾಪನೆಯನ್ನು ಕುಂದುವಾಡ ಗ್ರಾಮಸ್ಥರು ಭಾವೈಕ್ಯ, ಸೌಹಾರ್ದ ಹಾಗೂ ಸಹಬಾಳ್ವೆಯಿಂದ ಮಾಡುತ್ತಿದ್ದಾರೆ. ಈ ಕುಂದುವಾಡ ಗ್ರಾಮ ಸೌಹಾರ್ದ ಗ್ರಾಮವಾಗಿ ಬದಲಾಗಲಿ ಎಂದು ಹೇಳಿದರು.

ಹದಡಿಯ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ ಮಾತನಾಡಿ ಎಲ್ಲವನ್ನು ಕೊಟ್ಟ ದೇವರನ್ನು ಮರೆಯುತ್ತಿದ್ದೇವೆ. ನಿಸರ್ಗವನ್ನು ಹಾಳು ಮಾಡುತ್ತ, ಮಾಲಿನ್ಯ ಹೆಚ್ಚಿಸುತ್ತಿದ್ದೇವೆ. ನಮ್ಮಲ್ಲಿ ಭಯ ಮೂಡಿಸಲು ಹಿರಿಯರು ಊರಿಗೊಂದು ದೇವಸ್ಥಾನ ನಿರ್ಮಿಸಿದ್ದಾರೆ. ಆದರೆ ನಮ್ಮೊಳಗಿರುವ ದೇವರನ್ನು ನಾವು ಕಾಣಬೇಕು. ಮದಗಳನ್ನು ಕೈಬಿಡಬೇಕು. ಧರ್ಮ ಕಾರ್ಯ, ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ ಬಸವತತ್ವ ಎಲ್ಲರೂ ಕೂಡಿ ಬಾಳುವುದನ್ನು ಹೇಳಿದೆ. ಎಲ್ಲ ವರ್ಗಗಳಿಗೂ ಬಸವಣ್ಣನವರು ಸಾಮಾಜಿಕ ನ್ಯಾಯ ನೀಡಿದರು. ನಾವಿಂದು ಅವರ ದಾರಿಯಲ್ಲಿ ಸಾಗಬೇಕಿದೆ. ಬಸವಣ್ಣ ಕಂಡು ಕನಸು ಕುಂದುವಾಡ ಗ್ರಾಮದಲ್ಲಿ ಅನಾವರಣವಾಗಿದ್ದು, ಇಲ್ಲಿ ಸದಾ ಶಾಂತಿ ನೆಲೆಸಲಿ ಎಂದು ಆಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಗ್ರಾಮದವರು ತುಂಬಾ ಒಗ್ಗಟ್ಟಿನಿಂದ ದೇವಾಲಯ ನಿರ್ಮಾಣ ಮಾಡಿರೋದು ಮೆಚ್ಚುವಂತಾಗಿದೆ, ತಡವಾಗಿಯಾದರೂ ಗ್ರಾಮದಲ್ಲಿ ದೇಗುಲಗಳು ಉತ್ತಮವಾಗಿ ನಿರ್ಮಿತವಾಗಿವೆ. ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದೂ ಹೇಳಿದರು. ದಾವಣಗೆರೆ- ಹಳೇ ಕುಂದುವಾಡ ಮುಖ್ಯ ರಸ್ತೆಗೆ ಹೊಂದಿಕೊಂಡ ರಸ್ತೆ ವ್ಯಾಜ್ಯ ನ್ಯಾಯಾಲಯದಲ್ಲಿದ್ದು ಇದನ್ನು ತೆರವುಗೊಳಿಸಿದಲ್ಲಿ ಗ್ರಾಮಸ್ಥರು ಬಯಸಿದಂತೆ 80 ಅಡಿ ರಸ್ತೆ ನಿರ್ಮಾಣ ಮಾಡಲು ಬದ್ಧನಿದ್ದೇನೆ. ಈ ಸಂಬಂಧ ದೂಡಾ ಅಧಿಕಾರಿಗಳು, ಜಮೀನಿನ ಮಾಲೀಕರು, ಗುತ್ತಿಗೆದಾರರನ್ನು ಸೇರಿಸಿ ಸಭೆ ನಡೆಸೋಣ ಎಂದರು.

ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಈ ಭಾಗದಲ್ಲಿ ದೇಗುಲಗಳ ಸಂಖ್ಯೆ ಹೆಚ್ಚಿದೆ. ಹಿಂದುಳಿದ ವರ್ಗದ ಮಕ್ಕಳು ವಿದ್ಯಾವಂತರಾದರೆ ಇಂತಹ ಹತ್ತು ದೇವಸ್ಥಾನ ಕಟ್ಟುತ್ತಾರೆ, ಹೀಗಾಗಿ ಶಾಲೆಗಳ ನಿರ್ಮಾಣಕ್ಕೂ ಮಹತ್ವ ನೀಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮೈಲಾರ ಕ್ಷೇತ್ರದ ಕಾರ್ಣಿಕ ನುಡಿಯುವ ರಾಮಪ್ಪಜ್ಜ, ಹಳೆಕುಂದುವಾಡದ ಸ್ವಾಮಿಜಿ ರಾಜಣ್ಣ, ಮುಖಂಡರಾದ ಬಿ.ಜಿ. ಅಜಯಕುಮಾರ್, ಲೋಕಿಕೆರೆ ನಾಗರಾಜ್, ಶ್ರೀನಿವಾಸ ದಾಸಕರಿಯಪ್ಪ, ಎಚ್. ವೆಂಕಟೇಶ್, ಜೆ.ಎನ್. ಶ್ರೀನಿವಾಸ್. ಶ್ವೇತಾ ಶ್ರೀನಿವಾಸ್, ಮುದೇಗೌಡ್ರ ಗಿರೀಶ್, ತಹಸೀಲ್ದಾರ್ ಬಿ.ಎನ್.ಅಶ್ವಥ್, ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು, ಯುವಕರು, ಗ್ರಾಮಸ್ಥರು ಸೇರಿದಂತೆ ಇತರರಿದ್ದರು.

Next Post
ಕೊಕ್ಕನೂರು ಗ್ರಾಮದಲ್ಲಿ ವೃದ್ಧ ಮಹಿಳೆ ಸರಗಳ್ಳತನ ಮಾಡಿದ್ದ ಆರೋಪಿ ಬಂಧನ

ಕೊಕ್ಕನೂರು ಗ್ರಾಮದಲ್ಲಿ ವೃದ್ಧ ಮಹಿಳೆ ಸರಗಳ್ಳತನ ಮಾಡಿದ್ದ ಆರೋಪಿ ಬಂಧನ

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In