SUDDIKSHANA KANNADA NEWS/ DAVANAGERE/ DATE:16-01-2025
ದಾವಣಗೆರೆ: ನಗರದ ಹಳೇ ಕುಂದುವಾಡ ನಿವಾಸಿ, ಜಿಲ್ಲಾ ಕುರುಬ ಸಮಾಜ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಂಚಿನಮನೆ ತಿಪ್ಪಣ್ಣ(76) ಗುರುವಾರ ಬೆಳಿಗ್ಗೆ ನಿಧನರಾದರು.
ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸಹೋದರರು ಸೇರಿದಂತೆ ಅಪಾರ ಬಂಧು ಬಳಗ ಅಗಲಿರುವ ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಹಳೇ ಕುಂದುವಾಡ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಗಣ್ಯರ ಸಂತಾಪ:
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಹಂಚಿನ ಮನೆ ತಿಪ್ಪಣ್ಣ ನಿಧನಕ್ಕೆ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್. ಎಸ್.ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅಗಲಿದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕರಾದ ಹಂಚಿನ ಮನೆ ತಿಪ್ಪಣ್ಣ ಅವರು ದಾವಣಗೆರೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಮಾಜಿ ಕಾರ್ಪೋರೇಟರ್ ಆಗಿ ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಎಂದು ಶಾಸಕರು, ಸಚಿವರು ಹಾಗೂ ಸಂಸದರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
ಅಪಾರ ಬಂಧು ಬಳಗ ಅಗಲಿರುವ ಹಂಚಿನಮನೆ ತಿಪ್ಪಣ್ಞ ಅವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಗಲಿಕೆಯಿಂದ ಅವರ ಕುಟುಂಬ ವರ್ಗಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಆ ಭಗವಂತನು ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಅವರುಗಳು ಪ್ರಾರ್ಥಿಸಿದ್ದಾರೆ.