SUDDIKSHANA KANNADA NEWS/ DAVANAGERE/ DATE:11-03-2025
ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಹವಾಲಾ ನಂಟು ಬೆಸೆದುಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ರನ್ಯಾ ರಾವ್ ಬಂಧನದ ಸಂದರ್ಭದಲ್ಲಿ ಸಚಿವರೊಬ್ಬರನ್ನು ಸಂಪರ್ಕಿಸಲು ಯತ್ನಿಸಿರುವುದು ಕಾಂಗ್ರೆಸ್ ಸರ್ಕಾರದ ಪ್ರಭಾವಿಗಳ ಕೈವಾಡ ಇರುವ ಬಗ್ಗೆ ಸ್ಪಷ್ಟ ಅನುಮಾನಗಳು ಮೂಡುತ್ತಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ರನ್ಯಾ ರಾವ್ ಅವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಪುತ್ರಿಯೂ ಆಗಿರುವ ಹಿನ್ನೆಲೆಯಲ್ಲಿ ಇಡೀ ಸರ್ಕಾರದ ವ್ಯವಸ್ಥೆಯ ಮೇಲೆ ಕರಿ ನೆರಳು ಆವರಿಸಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ನಮ್ಮ ರಾಜ್ಯಕ್ಕೂ ಕಳಂಕ ತಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪ್ರಕರಣದ ಕುರಿತು ವಾಸ್ತವ ಸ್ಥಿತಿಯನ್ನು ಜನತೆಗೆ ತಿಳಿಸಬೇಕೆಂದು ಒತ್ತಾಯಿಸುವೆ. ಸಿಬಿಐ ತನಿಖೆ ನಡೆಸುತ್ತಿರುವುದರಿಂದ
ಈ ತನಿಖೆ ತಾರ್ಕಿಕ ಅಂತ್ಯ ತಲುಪಲಿದೆ ಎಂಬ ವಿಶ್ವಾಸವಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.