SUDDIKSHANA KANNADA NEWS/ DAVANAGERE/ DATE:29-10-2024
ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಹಾತ್‍ಕರ್ಗಾ ಕೈಮಗ್ಗ ಮೇಳ ವಸ್ತ್ರ ಭಂಡಾರವನ್ನು ನವೆಂಬರ್ 1 ರಂದು ಸಂಜೆ 4.30 ಗಂಟೆಗೆ ಧಾರವಾಡದ ಡಿಸಿ ಕಂಪೌಂಡ ಹತ್ತಿರ ಇರುವ ದಿ. ಇನ್‍ಸ್ಟಿಟ್ಯೂಶನ್ ಆಫ್ ಇಂಜಿನಿಯರ್ಸ್‍ದಲ್ಲಿ ಆಯೋಜಿಸಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕಾರ್ಯಕ್ರಮ ಉದ್ಘಾಟಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಮಳಿಗೆಗಳ ಉದ್ಘಾಟಿಸುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕರ್ನಾಟಕ, ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾ ಮಂಡಳಿ ನಿಗಮದ ಅಧ್ಯಕ್ಷ ಬಿ. ಜೆ ಗಣೇಶ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಬಾ. ಶೆಟ್ಟೆನ್ನನವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಕೈಮಗ್ಗ ಮತ್ತು ಜವಳಿ ನಿರ್ದೇಶಕ ಹಾಗೂ ಜವಳಿ ಆಯುಕ್ತೆ ಕೆ.ಜ್ಯೋತಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಎಂ.ಬ್ಯಾಕೋಡ, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವರ್ನಿತ ನೇಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ಪಶ್ಚಿಮ ವಿಭಾಗದ ಜಂಟಿ ನಿರ್ದೇಶಕ ಸಫಾರೆ ಶ್ರೀನಿವಾಸ, ಕೈಮಗ್ಗ ಮತ್ತು ಜವಳಿ ಇಲಾಖೆ ಕೇಂದ್ರ ಕಚೇರಿಯ
ಜಂಟಿ ನಿರ್ದೇಶಕ ಸುರೇಶಕುಮಾರ ಎ., ನೇಕಾರರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಮಾರಿಮುತ್ತು ಎಸ್, ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಶಿವಪುತ್ರಪ್ಪ ಹೊಸಮನಿ ಅವರು ಭಾಗವಹಿಸುವರೆಂದು ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.