ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

5.18 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ವಾರಸುದಾರರಿಗೆ ಹಸ್ತಾಂತರ: ವಶಪಡಿಸಿಕೊಡಗೊಂಡ ವಾಹನಗಳೆಷ್ಟು ಗೊತ್ತಾ…?

On: December 29, 2023 3:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:29-12-2023

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ವರ್ಷಗಳ ಅವಧಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ 5 ಕೋಟಿ 18 ಲಕ್ಷ ರೂ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಾಲ್ಕು ಚಕ್ರದ ವಾಹನಗಳನ್ನು ವಶಪಡಿಸಿಕೊಂಡು ಅವರ ವಾರಸುದಾರರಿಗೆ ವಿತರಣೆ ಮಾಡಲಾಯಿತು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿನ ಡಿ ಎ ಆರ್ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವತ್ತು ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ
ಪ್ರಾಪರ್ಟಿ ರಿಟನ್ ಪೆರೇಡ್ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚಾರಣೆ ನಡೆಸಲಾಗುತ್ತಿದ್ದು, ಈ ವೇಳೆ ಕಳವು
ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಸತ್ತುಗಳನ್ನು ವಾಪಸ್ಸು ಕೊಡಲಾಗುವುದು. ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸ್ವತ್ತುಗಳನ್ನು ಪತ್ತೆ ಮಾಡಲಾಗಿದೆ. ಪ್ರಕರಣಗಳಲ್ಲಿ ತನಿಖೆ ನಡೆಸಿ ಪತ್ತೆ ಮಾಡಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಪ್ರಶಂಸೆ ಪತ್ರದ ಜೊತೆಗೆ ನಗದು ಬಹುಮಾನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಳೆದ ಒಂದು ವರ್ಷದ ಅವಧಿಯಲ್ಲಿ 4,493 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು 2,24,65,000 ಮೌಲ್ಯ, ಅದೇ ರೀತಿ 50 ಕೆಜಿ 800 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ 35,56,000,
ಅಲ್ಲದೇ 175 ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳಲ್ಲಿ ತನಿಖೆ ನಡೆಸಿದಾಗ, 356 ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. ಇದರ ಒಟ್ಟು ಮೌಲ್ಯ 84,78,000 ಆಗಿದೆ. ಇನ್ನೂ ನಾಲ್ಕು ಚಕ್ರದ ವಾಹನಗಳ ಪ್ರಕರಣದಲ್ಲಿ
21 ವಾಹನಗಳನ್ನು ಪತ್ತೆ ಮಾಡಲಾಗಿದ್ದು, 65,35,000 ರೂಪಾಯಿ ಮೌಲ್ಯ ಅಗಿದೆ ಎಂದು ತಿಳಿಸಿದರು. ಈ ವೇಳೆ ಎಎಸ್ಪಿ ವಿಜಯ್ ಕುಮಾರ್, ಡಿ ವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment