Home ದಾವಣಗೆರೆ ಜನತೆಗೆ ಬಿಗ್ ಶಾಕ್: ತುಂಗಭದ್ರಾ ನದಿಯಲ್ಲಿ ನೀರಿನ ಕೊರತೆ, ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!
ದಾವಣಗೆರೆನವದೆಹಲಿಬೆಂಗಳೂರು

ಜನತೆಗೆ ಬಿಗ್ ಶಾಕ್: ತುಂಗಭದ್ರಾ ನದಿಯಲ್ಲಿ ನೀರಿನ ಕೊರತೆ, ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!

Share
ತುಂಗಭದ್ರಾ
Share

ದಾವಣಗೆರೆ: ಹರಿಹರ ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ನಗರಸಭೆ ಪೌರಾಯುಕ್ತರು ಕುಡಿಯುವ ನೀರು ಬಳಕೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆಯು ತೀರಾ ಕಡಿಮೆಯಾಗಿರುವುದರಿಂದ ಹರಿಹರ ನಗರಕ್ಕೆ ನೀರು ಒದಗಿಸುವ ಪ್ರಮುಖ ಜಲಮೂಲವಾದ ತುಂಗಭದ್ರಾ ನದಿಯ ಒಳಹರಿವಿನಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಹರಿಹರ ನಗರಸಭಾ ವ್ಯಾಪ್ತಿಯ ಕವಲೆತ್ತು ಗ್ರಾಮದ ಹತ್ತಿರವಿರುವ ತುಂಗಭದ್ರಾ ನದಿಯ ಮೂಲದ ಒಳಹರಿವಿನಲ್ಲಿ ನೀರಿನ ಕೊರತೆ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ನಗರಕ್ಕೆ ಸರಬರಾಜಾಗುವ ನಿರಂತರ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ನಾಗರಿಕರು ಸಹಕರಿಸಬೇಕಾಗಿ ಕೋರಲಾಗಿದೆ.

ನಗರಸಭೆ ನೀಡಿದ ಪ್ರಮುಖ ಸೂಚನೆಗಳು:

ನೀರನ್ನು ವ್ಯರ್ಥ ಮಾಡಬೇಡಿ: ನಗರಸಭೆಯಿಂದ ನೀರು ಸರಬರಾಜು ಮಾಡಿದ ಸಂದರ್ಭದಲ್ಲಿ ಸಾರ್ವಜನಿಕರು ನೀರನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬಾರದು. ಲಭ್ಯವಿರುವ ನೀರನ್ನು ಮಿತವಾಗಿ ಬಳಸಿ, ಮುಂದಿನ ದಿನಗಳಿಗಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು.

ಕುದಿಸಿ ಆರಿಸಿದ ನೀರನ್ನೇ ಕುಡಿಯಿರಿ: ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ಕಡ್ಡಾಯವಾಗಿ ನೀರನ್ನು ಚೆನ್ನಾಗಿ ಕುದಿಸಿ, ಆರಿಸಿದ ನಂತರವೇ ಕುಡಿಯಲು ಬಳಸಬೇಕು ಎಂದು ಹರಿಹರ ನಗರಸಭೆ ಪೌರಾಯುಕ್ತರು ಸಾರ್ವಜನಿಕರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *