Home ದಾವಣಗೆರೆ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರ ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರವರೆಗೆ ವಿಸ್ತರಣೆ
ದಾವಣಗೆರೆಬೆಂಗಳೂರು

ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರ ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರವರೆಗೆ ವಿಸ್ತರಣೆ

Share
ಹರಿಹರ
Share

ದಾವಣಗೆರೆ: ಪ್ರಸಕ್ತ ಸಾಲಿನ ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ನಿವೇಶನ ಮತ್ತು ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಮಹತ್ವದ ಸುದ್ದಿಯೊಂದಿದೆ. ಆಶ್ರಯ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸುವ ಕಾಲಾವಕಾಶವನ್ನು ಇದೀಗ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹರಿಹರ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲದ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತರು ಪಿಎಂಎವೈ (PMAY) ಅಧಿಕೃತ ವೆಬ್‍ಸೈಟ್ ಆದ http://pmay-urban.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಥವಾ ಇಂಟರ್ನೆಟ್ ಸೌಲಭ್ಯವಿಲ್ಲದವರು ನೇರವಾಗಿ ಹರಿಹರ ನಗರಸಭೆಯ ಕಚೇರಿಯಲ್ಲಿರುವ ‘ಆಶ್ರಯ ಶಾಖೆ’ಗೆ ಖುದ್ದಾಗಿ ಭೇಟಿ ನೀಡಿ, ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪೌರಾಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *