SUDDIKSHANA KANNADA NEWS/ DAVANAGERE/ DATE:10-03-2025
ದಾವಣಗೆರೆ: ನವಜಾತು ಶಿಶುವನ್ನ ಕಾಲುವೆ ಎಸೆದು ಹೋದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಜಯಶ್ರೀ ಬಡಾವಣೆಯ ಬೊಂಗಾಳೆ ಆಸ್ಪತ್ರೆ ಬಳಿ ನಡೆದಿದೆ.
ಮಗು ಜನನವಾಗುತಿದ್ದಂತೆಯೇ ಕರುಳಬಳ್ಳಿ ಸಮೇತ ಕಾಲುವೆಗೆ ನಿರ್ದಯಿಗಳು ಎಸೆದು ಹೋಗಿದ್ದಾರೆ. ಮಾನವೀಯತೆ ಮರೆತು ಮಗುವನ್ನು ಚರಂಡಿಗೆ ಕ್ರೂರಿಗಳು ಎಸೆದಿದ್ದಾರೆ. ಸ್ಥಳಕ್ಕೆ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಕೊಲೆ ಮಾಡಿ ಚರಂಡಿಗೆ ಎಸೆದಿದ್ದಾರಾ? ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹುಟ್ಟಿದ ಮಗುವನ್ನು ಎಸೆದು ಹೋಗಿದ್ದಾರಾ ಎಂಬ ಕುರಿತಂತೆ ಯಾವುದೇ ಸ್ಪಷ್ಟತೆ ಇಲ್ಲ. ಮಗುವನ್ನು ಎಸೆದವರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ಹಾಗೂ ಸ್ಥಳೀಯರಿಂದ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಶೋಧ ಮುಂದುವರಿಸಿದ್ದಾರೆ.