ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮತ್ತು ಪೊಲೀಸರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ
ಹರೀಶ್ ಪೂಂಜಾ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರಕಾರದ ಹೆಚ್ಚುವರಿ ಅಭಿಯೋಜಕರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
2 ಎಫ್‌ಐಆರ್ ಪ್ರಶ್ನಿಸಿ ಪೂಂಜಾ ಹೈಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆಯು ನ್ಯಾ.ಕೃಷ್ಣ ದೀಕ್ಷಿತ್ ಅವರ ಪೀಠದಲ್ಲಿ ನಿನ್ನೆ ನಡೆದಿತ್ತು. ತಮ್ಮ ಕಕ್ಷಿದಾರರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಪೂಂಜಾ ಪರ ವಕೀಲರು ಹೇಳಿದಾಗ,
ಅರ್ಜಿದಾರರನ್ನು ಬಂಧಿಸದಂತೆ ಕೋರ್ಟ್ ಸೂಚಿಸಿದೆ.