Home ಕ್ರೈಂ ನ್ಯೂಸ್ ಮೆಡಿಕಲ್ ಕಾಲೇಜಿನಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಮೆಡಿಕಲ್ ಕಾಲೇಜಿನಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ!

Share
ಮೆಡಿಕಲ್
Share

ಸೋನಿಪತ್ (ಹರಿಯಾಣ): ಹರಿಯಾಣದ ಖಾನ್‌ಪುರ್ ಕಲಾನ್‌ನಲ್ಲಿರುವ ‘ಭಗತ್ ಫೂಲ್ ಸಿಂಗ್ ಸರ್ಕಾರಿ ಮಹಿಳಾ ಮೆಡಿಕಲ್ ಕಾಲೇಜಿ’ನಲ್ಲಿ ಇಬ್ಬರು ಎಂ ಬಿ ಬಿ ಎಸ್ ಇಂಟರ್ನ್ ವೈದ್ಯಕೀಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಟ್ಟಡ ಕಾರ್ಮಿಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ:

ಆಗಸ್ಟ್ 15ರ ರಾತ್ರಿ ಸುಮಾರು 10:30ರ ವೇಳೆಗೆ ಈ ಘಟನೆ ನಡೆದಿದೆ. ಓರ್ವ ವಿದ್ಯಾರ್ಥಿನಿ ಗ್ರಂಥಾಲಯಕ್ಕೆ ಹಾಗೂ ಮತ್ತೊಬ್ಬರು ತಮ್ಮ ಕರ್ತವ್ಯ ನಿಮಿತ್ತ ಕ್ಯಾಂಪಸ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಕಾಲೇಜಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಇಬ್ಬರಿಗೂ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಕೆಲವೇ ನಿಮಿಷಗಳ ಅಂತರದಲ್ಲಿ ಪ್ರತ್ಯೇಕವಾಗಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರನ್ನೂ ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾನೆ.

ಪೊಲೀಸ್ ಕ್ರಮ:

ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿನಿಯರು ನೀಡಿದ ದೂರಿನನ್ವಯ ಖಾನ್‌ಪುರ್ ಕಲಾನ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 74 (ಮಹಿಳೆಯರ ಮಾನಭಂಗಕ್ಕೆ ಯತ್ನ/ದಾಳಿ) ಹಾಗೂ ಸೆಕ್ಷನ್ 78 (ಸ್ಟಾಕಿಂಗ್ / ಬೆನ್ನಟ್ಟುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಕಾರ್ಮಿಕನನ್ನು ಆಗಸ್ಟ್ 16ರಂದು ಬಂಧಿಸಲಾಗಿದೆ.

ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ:

ಘಟನೆ ಬೆನ್ನಲ್ಲೇ ಕಾಲೇಜು ಕ್ಯಾಂಪಸ್‌ನಲ್ಲಿ ಸೂಕ್ತ ಭದ್ರತೆ ಇಲ್ಲದಿರುವುದನ್ನು ಖಂಡಿಸಿ ನೂರಾರು ಎಂ ಬಿ ಬಿ ಎಸ್ ವಿದ್ಯಾರ್ಥಿಗಳು ಸಂಸ್ಥೆಯ ಡೈರೆಕ್ಟರ್ ಕಚೇರಿ ಮುಂದೆ ಧರಣಿ ನಡೆಸಿದರು. ಕ್ಯಾಂಪಸ್‌ನಲ್ಲಿ ಅಗತ್ಯ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನು ತಕ್ಷಣವೇ ಹೆಚ್ಚಿಸಬೇಕೆಂದು ಆಗ್ರಹಿಸಿದರು.

Share

Leave a comment

Leave a Reply

Your email address will not be published. Required fields are marked *