ಹಾಸನ: ಹಾಸನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2026ನೇ ಸಾಲಿನ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, 48 ಪ್ಯೂನ್ (ಸೇವಕ/ಅಟೆಂಡರ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. SSLC (10ನೇ ತರಗತಿ) ಉತ್ತೀರ್ಣರಾಗಿರುವ ಮತ್ತು ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ನೇಮಕಾತಿಯ ಪ್ರಮುಖ ವಿವರಗಳು:
ಸಂಸ್ಥೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ
ಹುದ್ದೆಯ ಹೆಸರು: ಪ್ಯೂನ್ / ಸೇವಕ (ಗ್ರೂಪ್-ಡಿ)
ಒಟ್ಟು ಹುದ್ದೆಗಳು: 48
ವೇತನ ಶ್ರೇಣಿ: ₹27,000 ದಿಂದ ₹46,675 ರವರೆಗೆ
ವಿದ್ಯಾರ್ಹತೆ ಮತ್ತು ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು. ಸರ್ಕಾರದ ಆದೇಶದಂತೆ ಒಂದು ಬಾರಿಯ 5 ವರ್ಷದ ಸಡಿಲಿಕೆ ಸೇರಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 40 ವರ್ಷ, 2A/2B/3A/3B ವರ್ಗಕ್ಕೆ 43 ವರ್ಷ ಹಾಗೂ SC/ST/ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. SSLC ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, 10 ಅಂಕಗಳ ನೇರ ಸಂದರ್ಶನದ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳು:
ಅರ್ಜಿ ಶುಲ್ಕ: ಸಾಮಾನ್ಯ, 2A, 2B, 3A, 3B ಹಾಗೂ ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ₹200. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಆರಂಭ: 19 ಆಗಸ್ಟ್ 2026
ಕೊನೆಯ ದಿನಾಂಕ: 17 ಸೆಪ್ಟೆಂಬರ್ 2026 (ರಾತ್ರಿ 11:59 ರವರೆಗೆ)
ಅರ್ಹ ಅಭ್ಯರ್ಥಿಗಳು ಹಾಸನ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ hassan.dcourts.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.





Leave a comment