ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅನಾರೋಗ್ಯದಿಂದಾಗಿ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ: ಎಚ್‌ಡಿ ದೇವೇಗೌಡ

On: June 9, 2024 5:35 PM
Follow Us:
---Advertisement---

ಬೆಂಗಳೂರು: ಅನಾರೋಗ್ಯ ಕಾರಣದಿಂದಾಗಿ ನಾನು ಇಂದು ಸಂಜೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ತಿಳಿಸಿದ್ದಾರೆ. ಈ ಕುರಿತು ಎಚ್‌ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರವೇ ಭಾರತಕ್ಕೆ ಬಂದಿಳಿದಿದ್ದಾರೆ. ಅವರಲ್ಲದೆ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೆರಿಂಗ್ ಟೋಬಗೆ, ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಮಾರಿಷಸ್‌ ಪ್ರಧಾನಿ ಪ್ರವಿಂದ ಕುಮಾರ್ ಜಗನ್ನಾಥ್ ಸೇರಿ ಹಲವು ರಾಷ್ಟ್ರಗಳ ಗಣ್ಯರು ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಅತಿಥಿಗಳು ಭಾಗವಹಿಸಲಿದ್ದಾರೆ.

Join WhatsApp

Join Now

Join Telegram

Join Now

Leave a Comment