SUDDIKSHANA KANNADA NEWS/ DAVANAGERE/ DATE:29_05-2023
”
ದಾವಣಗೆರೆ: ಜೆಪಿ ತಾನೂ ಹಿಂದೆ ದೇಶದ ಹಾಗೂ ರಾಜ್ಯದ ಜನತೆ ನೀಡಿದ ಭರವಸೆಗಳನ್ನು ಈಡೇರಿಸದಿರುವಂತೆ ಕಾಂಗ್ರೆಸ್ ಪಕ್ಷವು ಹಾಗೆ ಮಾಡಬಹುದೆಂಬ ಭ್ರಮೆಯಲ್ಲಿದೆ. ಬಿಜೆಪಿ ಸ್ಥಿತಿ “ತಾನು ಕಳ್ಳ ಪರರನ್ನು ನಂಬ” ಎಂಬಂತಾಗಿದೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ ಬಿಜೆಪಿ ನಾಯಕರ ನಡೆಯನ್ನು ಕುಟುಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷ ತಾನು ಮೊದಲೇ ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ಮೊದಲ ಸಂಪುಟದಲ್ಲಿಯೇ ಐದು ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ
ನೀಡಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ವಿಸ್ತರಣೆ ಹಾಗೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸುವ ಉದ್ದೇಶದಿಂದ ಯೋಜನೆ ಜಾರಿಗೆ ಸ್ವಲ್ಪ ನಿಧಾನವಾಗಿದ್ದು, ಸರ್ಕಾರ ಬಂದು ಇನ್ನು ತಿಂಗಳೇ ಕಳೆದಿಲ್ಲ. ಬಿಜೆಪಿಯವರು ಸ್ವಲ್ಪ ಕಾಯಬೇಕು ಎಂದಿದ್ದಾರೆ.
ಆದರೆ 2013 ರಿಂದ 2018ರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಕ್ಷ ರಾಜ್ಯದ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ರಾಜ್ಯದ ಜನರ ನಂಬಿಕೆಗೆ ಪಾತ್ರವಾಗಿದ್ದು, ಈ ಬಾರಿಯೂ ಸಹ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ, ಎಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಜನತೆಗೆ ನೀಡಿ ಮುಂದೆ ಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮುಂದಿನ ವರ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ತಮ್ಮ ಪಕ್ಷವನ್ನು ಮೂಲೆ ಗುಂಪು ಮಾಡಬಹುದೆಂಬ ಭಯದಿಂದ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಮಾಹಿತಿ ನೀಡುವ ಮೂಲಕ ಪ್ರಚೋದಿಸುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಜನತೆ ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷವನ್ನು ನಂಬಬೇಕೆ, ಕೇವಲ ಕೋಮು ದ್ವೇಷ ಬಿತ್ತುತ್ತ, ಯಾವುದೇ ಜನಪರ ಯೋಜನೆ ಜಾರಿಗೆ ತರದ ಬಿಜೆಪಿ ಬಗ್ಗೆ ಎಚ್ಚರದಿಂದಿರಬೇಕೆಂದು ಮನವಿ ಮಾಡಿದ್ದಾರೆ.