ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹಲ್ಲುಗಳನ್ನು ಆರೋಗ್ಯವಾಗಿಡಲು ಇಲ್ಲಿದೆ ಸಿಂಪಲ್ ಟಿಪ್ಸ್ ಫಾಲೋ ಮಾಡಿ

On: August 5, 2024 10:05 AM
Follow Us:
---Advertisement---

ಪ್ರತಿಯೊಬ್ಬರ ಬಾಯಿಯಿಂದಲೇ ಆರೋಗ್ಯ ಹೇಗಿದೆ ಎಂದು ತಿಳಿದುಬರುತ್ತದೆ. ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿರಿಸಿಕೊಳ್ಳಬೇಕು, ಹೀಗಾಗಿ ಅವುಗಳನ್ನು ಸ್ವಚ್ಛತೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ. ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್
ಹಲ್ಲಿನ ಆರೋಗ್ಯವು ಕಾಳಜಿಯ ವಿಷಯವಾಗಿರುವುದರಿಂದ, ಆರೋಗ್ಯಕರ ಹಲ್ಲುಗಳು ಮತ್ತು ಒಸಡುಗಳಿಗಾಗಿ ಒಬ್ಬರ ಆಹಾರದಲ್ಲಿ ಸೇರಿಸಬೇಕಾದ ಕೆಲವು ಆಹಾರ ಪದಾರ್ಥಗಳ ಮೇಲೆ ಬೆಳಕು ಚೆಲ್ಲಲು ಇಲ್ಲಿ ಪ್ರಯತ್ನಸಿದ್ದೇವೆ. ಹಲ್ಲಿನ ಆರೋಗ್ಯಕ್ಕೆ ಯಾವ ಆಹಾರಗಳ ಸೇವನೆ ಉತ್ತಮ ಎಂದು ಇಲ್ಲಿ ತಿಳಿಸಲಾಗಿದೆ.

ಮೊಸರು
ಕ್ಯಾಲ್ಸಿಯಂ ಮತ್ತು ಪ್ರೋಟೀನ್ನಲ್ಲಿ ಮೊಸರು ಅಧಿಕವಾಗಿದೆ. ಇದು ನಿಮ್ಮ ಹಲ್ಲು ಮತ್ತು ಒಸಡುಗಳ ಶಕ್ತಿ ಮತ್ತು ಆರೋಗ್ಯಕ್ಕೆ ಸೂಕ್ತವಾದ ಆಯ್ಕೆಯಾಗಿದೆ. ಮೊಸರಿನಲ್ಲಿ ಕಂಡು ಬರುವ ಪ್ರೋಬಯಾಟಿಕ್ಗಳು ನಿಮ್ಮ ಒಸಡುಗಳಿಗೆ ಪ್ರಯೋಜನವನ್ನು ನೀಡುತ್ತದೆ.

ಹಸಿರು ತರಕಾರಿಗಳು
ಆರೋಗ್ಯಕರ ಜೀವನ ಮತ್ತು ಆರೋಗ್ಯಕರ ಹಲ್ಲುಗಳಿಗೆ ಹಸಿರು ಸೊಪ್ಪು, ತರಕಾರಿಗಳು ಉತ್ತಮ ಆಹಾರ ಪದಾರ್ಥಗಳಾಗಿವೆ. ಏಕೆಂದರೆ ಅವುಗಳು ವಿಟಮಿನ್ಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ.

ಸೇಬು
ಸೇಬಿನಂತಹ ಹಣ್ಣುಗಳಲ್ಲಿ ಫೈಬರ್ ಮತ್ತು ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಸೇಬನ್ನು ತಿನ್ನುವುದರಿಂದ ನಿಮ್ಮ ಬಾಯಿಯಲ್ಲಿ ಲಾಲಾರಸ ಉತ್ಪತ್ತಿಯಾಗುತ್ತದೆ. ಇದು ಅನಗತ್ಯವಾದ ಬ್ಯಾಕ್ಟೀರಿಯಾ ಮತ್ತು ಆಹಾರದ ಕಣಗಳನ್ನು ತೊಳೆಯುತ್ತದೆ. ಸೇಬುಗಳ ನಾರಿನ ಅಂಶ ಕೂಡ ಒಸಡುಗಳನ್ನು ಉತ್ತೇಜಿಸುತ್ತದೆ.

Join WhatsApp

Join Now

Join Telegram

Join Now

Leave a Comment