ಕೊತ್ತಂಬರಿ ಸೊಪ್ಪಿನಲ್ಲಿ ಹಲವಾರು ಔಷಧೀಯ ಗುಣಗಳಿವೆ. ಇದರ ರಸವನ್ನು ದಿನನಿತ್ಯ ಸೇವಿಸುವುದರಿಂದ ಅನೇಕ ಆರೋಗ್ಯ ಲಾಭಗಳಿವೆ.
ಇದು ವಿಟಮಿನ್ ಎ, ಸಿ, ಇ, ಕೆನಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೃದಯ, ಮೆದುಳು, ಚರ್ಮ, ಯಕೃತ್ತು, ಮೂಳೆಗಳು, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಗೆ ಇದರ ನೀರು ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಿಸಬಹುದು.