ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭಾರೀ ಗಾಳಿ, ಮಳೆಗೆ ಮಕಾಡೆ ಮಲಗಿದ ಬೆಳೆ: ಕೋಟ್ಯಾಂತರ ರೂ. ನಷ್ಟ, ಸಂಕಷ್ಟದಲ್ಲಿ ರೈತರು

On: May 22, 2023 12:08 PM
Follow Us:
---Advertisement---

SUDDIKSHANA KANNADA NEWS| DAVANAGERE- DATE:22-05-2023

ದಾವಣಗೆರೆ (DAVANAGERE): ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಬಿಸಿಲಿನ ಬೇಗೆಗೆ ತತ್ತರಸಿದ್ದ ಜನರಿಗೆ ವರುಣ ತಂಪೆರೆದರೂ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ರೈತರು ಬೆಳೆದಿದ್ದ ಬೆಳೆಗಳು ನೀರುಪಾಲಾಗಿವೆ. ಅದರಲ್ಲಿಯೂ ಭತ್ತ, ಬಾಳೆ, ಪಪ್ಪಾಯಿ ಸೇರಿದಂತೆ ಇತರೆ ಬೆಳೆಗಳು ನೀರುಪಾಲಾಗಿದ್ದು, ರೈತರಿಗೆ ಮತ್ತೊಂದು ಬರೆ ಬಿದ್ದಂತಾಗಿದೆ. ಸುಮಾರು 1 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಆಗಿದೆ ಅಂದಾಜಿಸಲಾಗಿದೆ.

ಭಾನುವಾರ ರಾತ್ರಿ ಭಾರೀ ಗಾಳಿ, ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿತ್ತು. ಮಾತ್ರವಲ್ಲ, ತರಕಾರಿಯೂ ಸಹ ನೀರುಪಾಲಾಗಿದೆ. ಕೈಗೆ ಬಂದಿದ್ದ ಫಸಲು ಬಾರದೇ ರೈತರು ಕಣ್ಣೀರು ಸುರಿಸುವಂತಾಗಿದೆ.

ಜಿಲ್ಲೆಯಲ್ಲಿ 13.6 ಮಿ.ಮೀ. ಸರಾಸರಿ ಮಳೆ ಸುರಿದಿದೆ. ಜಿಲ್ಲಾಡಳಿತ ಅಂದಾಜಿಸಿರುವ ಪ್ರಕಾರ ರೂ. 79.40 ಲಕ್ಷ ರೂ.ನಷ್ಟ ಸಂಭವಿಸಿದೆ. ಕೆಲವೆಡೆ ಮನೆಗಳು ಧರೆಗುರುಳಿದರೆ, ಮತ್ತೆ ಕೆಲವೆಡೆ ಜಮೀನಿನಲ್ಲಿ ನೀರು ನಿಂತಿದೆ. ನೀರು ಹೊರಹಾಕುವುದೇ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 9.5 ಮಿ.ಮೀ ಆಗಿದ್ದರೆ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.0 ಮಿ.ಮೀ.ನಷ್ಟು ಆಗಿದೆ. ವಾಸ್ತವ ಮಳೆ 19.5 ಮಿ.ಮೀ ಸುರಿದಿದೆ. ಹರಿಹರದಲ್ಲಿ ವಾಡಿಕೆ ಮಳೆ 1.1 ಮಿ.ಮೀ ಹಾಗೂ ವಾಸ್ತವ ಮಳೆ 17.2 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಜಗಳೂರು ವಾಡಿಕೆ ಮಳೆ 1.9 ಮಿ.ಮೀ ಹಾಗೂ ವಾಸ್ತವ ಮಳೆ 13.7 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 14.1 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾಮನೆ ಭಾಗಶಃ ಹಾನಿಯಾಗಿದ್ದು,150 ಎಕರೆ ಭತ್ತದ ಬೆಳೆ ಹಾಳಾಗಿದೆ.ರೂ. 30.60 ಲಕ್ಷ ಅಂದಾಜು ನಷ್ಟ, ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾಮನೆ ಭಾಗಶಃ ಹಾನಿಯಾಗಿದ್ದು, 295 ಎಕರೆ ಭತ್ತ ನೀರುಪಾಲಾಗಿದೆ. ಒಟ್ಟು ರೂ.18.93 ಲಕ್ಷ ಅಂದಾಜು ನಷ್ಟವಾಗಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾಮನೆ ತೀವ್ರ ಹಾನಿಯಾಗದ್ದು, 10 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 30 ಎಕರೆ ಅಡಿಕೆ, 38 ಎಕರೆ ಬಾಳೆ, 20 ಎಕರೆ ಪಪ್ಪಾಯಿ ಬೆಳೆ ಹಾನಿಯಾಗಿದೆ. 1 ಎತ್ತು ಮೃತಪಟ್ಟಿದ್ದು ಒಟ್ಟು ರೂ.29.87 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ.79.40 ಲಕ್ಷ ಅಂದಾಜು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

ಇನ್ನು ಕೆಲವೆಡೆ ಜಿಲ್ಲಾಡಳಿತ ಸರ್ವೇ ನಡೆಸಬೇಕಾಗಿದೆ. ಹಾಗಾಗಿ, ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಸಂಭವಿಸಿದೆ. ಬೆಳೆಗೆ ಮಳೆಗೆ ಕೊಚ್ಚಿ ಹೋಗಿರುವುದರಿಂದ ರಾಜ್ಯ ಸರ್ಕಾರವು ಈ ಹಿಂದೆ ನೀಡುತ್ತಿದ್ದ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ಬೆಳೆ ನಷ್ಟ ಅನುಭವಿಸಿದ ರೈತರು ಆಗ್ರಹಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment