ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ವಿಪರೀತ ಮಳೆ

On: May 15, 2024 10:07 AM
Follow Us:
---Advertisement---

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ. ಮುಂದಿನ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಂದು ವಾರಗಳ ಕಾಲ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಮನೆಯಿಂದ ಹೊರ ಬರುವ ಮುನ್ನ ಯೋಚಿಸಬೇಕಾಗಿದೆ.

ಹೌದು, ರಾಜ್ಯದಲ್ಲಿ ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕಡೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ರಾಜ್ಯದಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಇನ್ನೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ,ವಿಜಯನಗರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join WhatsApp

Join Now

Join Telegram

Join Now

Leave a Comment