ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಡೆಹ್ರಾಡೂನ್‌ನಲ್ಲಿ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ- ಯಾತ್ರಾರ್ಥಿಗಳು ಸುರಕ್ಷಿತ

On: May 24, 2024 2:01 PM
Follow Us:
---Advertisement---

ಡೆಹ್ರಾಡೂನ್ :ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಏಳು ಮಂದಿ ಯಾತ್ರಿಕರು ಇದ್ದರು. ಇದ್ದಕ್ಕಿದ್ದ ಹಾಗೆ ತಾಂತ್ರಿ ಕ ಅಡಚಣೆ ಉಂಟಾದ ಪರಿಣಾಮ ಕೇದಾರನಾಥದ ಹೆಲಿಪ್ಯಾಡ್‌ನಿಂದ ಕೆಲವು ಮೀಟರ್‌ಗಳ ದೂರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಂದು (ಶುಕ್ರವಾರ) ಮುಂಜಾನೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್ ಆಗಿತ್ತು . ಮಾರ್ಗ ಮಧ್ಯೆದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು , ತಕ್ಷಣ ಪೈಲಟ್ ತೆಗೆದುಕೊಂಡನಿರ್ಧಾರದಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರುದ್ರ ಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್ ಹೇಳಿದ್ದಾರೆ

 

Join WhatsApp

Join Now

Join Telegram

Join Now

Leave a Comment