ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್: ತೊಂದರೆಯಲ್ಲಿ ಇರುವವರಿಗೆ 7 ನಿಮಿಷದೊಳಗೆ ನೆರವು

On: November 24, 2023 8:55 AM
Follow Us:
---Advertisement---

SUDDIKSHANA KANNADA NEWS\ DAVANAGERE\ DATE:24-11-2023

ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್: ತೊಂದರೆಯಲ್ಲಿ ಇರುವವರಿಗೆ 7 ನಿಮಿಷದೊಳಗೆ ನೆರವು

ಬೆಂಗಳೂರು: ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಆರಂಭಿಸಲಾಗುತ್ತಿದ್ದು, ತೊಂದರೆಯಲ್ಲಿ ಇರುವವರಿಗೆ 7 ನಿಮಿಷದೊಳಗೆ ನೆರವು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿರ್ಭಯ ನಿಧಿ ಅಡಿ ಬೆಂಗಳರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಇಂದು ಉದ್ಘಾಟಿಸಲಾಗಿದೆ. ಈ ಯೋಜನೆಗೆ 661.5 ಕೋಟಿ ರೂ. ಖರ್ಚಾಗಿದೆ. ಕೇಂದ್ರ ಸರ್ಕಾರದ ಶೇ.60 ಹಾಗೂ ರಾಜ್ಯಸರ್ಕಾರದ ಶೇ. 40 ರಷ್ಟು ಅನುದಾನ ನೀಡಲಾಗಿದೆ. ಬೆಂಗಳೂರು ನಗರದ ಜನರಿಗೆ ಸುರಕ್ಷತೆಯನ್ನು ಈ ಕೇಂದ್ರ ಒದಗಿಸಲಿದೆ. ಮಹಿಳೆಯರು, ಅಂಗವಿಕಲರು, ವಯೋವೃದ್ಧರಿಗೆ ಯಾವುದೇ ತೊಂದರೆ ಸಂಭವಿಸಿದರೂ ಈ ಕೇಂದ್ರ ಅವರಿಗೆ ತ್ವರಿತ ಸಹಾಯ ಒದಗಿಸಲಿದೆ ಎಂದರು.

ಈ ಕೇಂದ್ರದ ಸಹಕಾರದಿಂದ ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಪೊಲೀಸರು 7 ನಿಮಿಷದೊಳಗೆ ಆಗಮಿಸಿ, ತೊಂದರೆಯಲ್ಲಿರುವ ಜನರಿಗೆ ನೆರವು ನೀಡಲಿದೆ. ಬೆಂಗಳೂರು ಸೇರಿದಂತೆ ದೇಶದ 8 ಕಡೆಗಳಲ್ಲಿ ಇಂತಹ ಕೇಂದ್ರವನ್ನು ತೆರೆಯಲಾಗಿದೆ. ದೇಶದ 8 ಸ್ಥಳಗಳಲ್ಲಿ ಈ ಕೇಂದ್ರಕ್ಕೆ ಮಂಜೂರಾತಿ ನೀಡಿದ್ದರೂ, ಬೆಂಗಳೂರಿನಲ್ಲಿ ಮಾತ್ರ ಸೇಫ್ ಸಿಟಿ ಕಮಾಂಡ್ ಕೇಂದ್ರ ಕಟ್ಟಡವನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗಿದೆ. ಈ ಕಟ್ಟಡಕ್ಕೆ ಸುಮಾರು 12 ಕೋಟಿ ರೂ. ವೆಚ್ಚವಾಗಿದೆ ಎಂದು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment