ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೇರ್ಪಡೆ ಸಮಸ್ಯೆ ಆಗುತ್ತಿದೆಯಾ? ಹಾಗಿದ್ರೆ ಹೆಲ್ಪ್ ಲೈನ್ ನಂಬರ್ 8481359000ಗೆ, ಮೊಬೈಲ್ ಆ್ಯಪ್ ಸಂಪರ್ಕಿಸಿ!

On: May 5, 2025 12:41 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-05-05-2025

ಬೆಂಗಳೂರು: ಒಳಮೀಸಲಾತಿ ಜಾರಿಗೆ ದತ್ತಾಂಶ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ಹೆಲ್ಪ್ ಲೈನ್ ನಂಬರ್ ನೀಡಿದೆ.

ಸೇರ್ಪಡೆ ಸಮಸ್ಯೆ ಆಗುತ್ತಿದೆಯಾ? ಹಾಗಿದ್ರೆ ಹೆಲ್ಪ್ ಲೈನ್ ನಂಬರ್ 8481359000ಗೆ, ಮೊಬೈಲ್ ಆ್ಯಪ್ ಸಂಪರ್ಕಿಸಬಹುದಾಗಿದೆ.

ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂಬುದು ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment