ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಗಾಯತ್ರಿ ಸಿದ್ದೇಶ್ವರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

On: July 31, 2025 8:49 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31_07_2025

ದಾವಣಗೆರೆ: ಕಳೆದ ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿ ಗೆಲುವು ಸಾಧಿಸಿರುವ ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಸಂಸದೆ ಸ್ಥಾನ ಅನೂರ್ಜಿತಗೊಳಿಸಬೇಕು ಎಂದು ಬಿಜೆಪಿ ಅಭ್ಯರ್ಥಿಯಾಗಿದ್ದ ಗಾಯತ್ರಿ ಸಿದ್ದೇಶ್ವರ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ಐ. ಅರುಣ್ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ. ಮತದಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆಮೀಷವೊಡ್ಡಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯ ಗಳಿಸಿರುವ ಪ್ರಭಾ ಮಲ್ಲಿಕಾರ್ಜುನ್ ಅವರ ಲೋಕಸಭಾ ಕ್ಷೇತ್ರದ ಸದಸ್ಯ ಸ್ಥಾನದ ಆಯ್ಕೆ ಅನೂರ್ಜಿತಗೊಳಿಸಬೇಕು ಎಂದು ಗಾಯತ್ರಿ ಸಿದ್ದೇಶ್ವರ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

READ ALSO THIS STORY: ಪಕ್ಷ ನಿಷ್ಠೆ, ಶ್ರಮಕ್ಕೆ ಪ್ರತಿಫಲ: ರಾಷ್ಟ್ರಮಟ್ಟದಲ್ಲಿ ಜನಮನ್ನಣೆ ಪಡೆದ “ಯುವನಾಯಕ”ನಿಗೆ ಪ್ರಮುಖ ಹುದ್ದೆ ಜವಾಬ್ದಾರಿ

ಚುನಾವಣಾ ಪ್ರಣಾಳಿಕೆಯಲ್ಲಿ ಮತದಾರರಿಗೆ ನೀಡಿದ ಭರವಸೆಗಳು ಹಾಗೂ ಗ್ಯಾರಂಟಿಗಳನ್ನು ಆಮೀಷ ಎನ್ನಲಾಗದು. ಇದನ್ನು ಪರಿಗಣಿಸಲು ಸಾಧ್ಯವಿಲ್ಲ ಎಂಬ ಪ್ರಭಾ ಮಲ್ಲಿಕಾರ್ಜುನ್ ಅವರ ಪರ ವಾದ ಮಂಡಿಸಿದ ವಕೀಲರ ವಾದವನ್ನು ಹೈಕೋರ್ಟ್ ಮಾನ್ಯ ಮಾಡಿದೆ ಎಂದು ಸಂಸದರ ಪರ ವಾದ ಮಡಿಸಿದ್ದ ವಕೀಲ ಪ್ರಶಾಂತ್ ಆರ್. ಗೌಡರ್ ತಿಳಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸುವ ಮೂಲಕ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿ ಕೊಡುವ ಭರವಸೆಯನ್ನು ಪ್ರಭಾ ಮಲ್ಲಿಕಾರ್ಜುನ್ ಅವರು ಮತದಾರರಿಗೆ ನೀಡಿದ್ದರು. ಇದು ಪ್ರಜಾಪ್ರತಿನಿಧಿ ಕಾಯ್ದೆ – 1951ರ
ಕಲಂ 123(1), 123(2), 123(4) ಮತ್ತು 123(6)ಕ್ಕೆ ವಿರುದ್ದವಾಗಿದೆ. ಮತದಾರರಿಗೆ ಲಂಚದ ಆಮಿ, ಒಡ್ಡಿರುವ ಮತ್ತು ಚುನಾವಣಾ ಅಕ್ರಮಗಳಿಂದ ಗೆದ್ದಿರುವ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧ ಎಂದು ಘೋಷಿಸಬೇಕು
ಎಂದು ಗಾಯತ್ರಿ ಸಿದ್ದೇಶ್ವರ ಅವರು ದೂರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment