ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೊರಟೂರು ಸರ್ಕಾರಿ ಪ್ರೌಢಶಾಲೆ ದುರವಸ್ಥೆ ಅನಾವರಣ: ಜಿ.ಬಿ ವಿನಯ್ ಕುಮಾರ್ ಕೊಟ್ಟ ಸಲಹೆ ಏನು…?

On: June 11, 2024 9:37 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:12-06-2024

ದಾವಣಗೆರೆ: ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್ ಅವರು, ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಸರಕಾರಿ ಪ್ರೌಢಶಾಲಾ ಶಾಲೆಗೆ ಭೇಟಿ ನೀಡಿ, ಶಾಲಾ ಸಿಬ್ಬಂದಿ ಜೊತೆಗೆ ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ವಿನಯ್ ಕುಮಾರ್, ಮಕ್ಕಳಿಗೆ ಸಿಗುತ್ತಿರುವ ಗ್ರಾಮೀಣ ಶಿಕ್ಷಣದ ಗುಣಮಟ್ಟ, ಈ ವಾರ್ಷಿಕ ದಾಖಲಾತಿಯಂತಹ ಮುಂತಾದ ವಿಷಯಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಬಳಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಸದಸ್ಯ ಎಂ. ಎನ್. ಹನುಮಂತಪ್ಪನವರು ಮಕ್ಕಳ ಕಲಿಕೆಗೆ ಕಂಪ್ಯೂಟರ್‌ ಗಳಿದ್ದರೂ ನಿರ್ವಹಣೆ ಕೊರತೆಯಿಂದಾಗಿ ಹಾಳಾಗಿವೆ, ಆಟದ ಮೈದಾನ, ಸಮರ್ಪಕ ಶೌಚಾಲಯ ವ್ಯವಸ್ಥೆ, ಶಾಲಾ ಕಾಂಪೌಂಡ್ ಇಲ್ಲದೇ ಇರುವುದರಿಂದ ಸುತ್ತಲಿನ ಜಮೀನುಗಳಿಂದ ಬರುವ ನೀರಿಂದ ಜಲಾವೃತಗೊಂಡ ಕಾರಣ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಉಲ್ಬಣ ಗೊಳ್ಳುತ್ತಿದ್ದು, ಈ ಎಲ್ಲಾ ಸಮಸ್ಯೆಗಳಿಂದಾಗಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆಗೆ ದಾಖಲಾತಿ ಮಾಡಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಮುಖ್ಯವಾಗಿ ಹಳೆಯ ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ಹಲವು ಬಾರಿ ಮೇಲಾಧಿಕಾರಿಗಳಿಗೆ ಗಮನಕ್ಕೆ ತಂದರೂ ಸಮಸ್ಯೆ ಬಗ್ಗೆ ಸ್ಪಂದಿಸಿಲ್ಲವೆಂದು ಉಪಸ್ಥಿತರಿದ್ದ ಗ್ರಾಮಸ್ಥರಾದ ವಿಜಯ್ ಸ್ವಾಮಿ, ಹನುಮಂತಪ್ಪ ಮಾಜಿ ಸೈನಿಕರು, ಹಾಲೇಶ್ ಕೊಡತಾಳ್, ಯೋಗೇಶ್, ರವಿ ಟಿ, ಪುಂಡಪ್ಪ, ನಾಗರಾಜ್ ಕೆ.ಡಿ, ರಮೇಶ್, ಡಿ ಹರೀಶ್ ಆರೋಪಿಸಿದರು. ಈ ವೇಳೆ ಮಾತನಾಡಿದ ವಿನಯ್ ಕುಮಾರ್ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ತನ್ನ ಕೈಯಲ್ಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment