SUDDIKSHANA KANNADA NEWS/ DAVANAGERE/ DATE:12-06-2024
ದಾವಣಗೆರೆ: ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್ ಅವರು, ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಸರಕಾರಿ ಪ್ರೌಢಶಾಲಾ ಶಾಲೆಗೆ ಭೇಟಿ ನೀಡಿ, ಶಾಲಾ ಸಿಬ್ಬಂದಿ ಜೊತೆಗೆ ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ವಿನಯ್ ಕುಮಾರ್, ಮಕ್ಕಳಿಗೆ ಸಿಗುತ್ತಿರುವ ಗ್ರಾಮೀಣ ಶಿಕ್ಷಣದ ಗುಣಮಟ್ಟ, ಈ ವಾರ್ಷಿಕ ದಾಖಲಾತಿಯಂತಹ ಮುಂತಾದ ವಿಷಯಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಬಳಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಸದಸ್ಯ ಎಂ. ಎನ್. ಹನುಮಂತಪ್ಪನವರು ಮಕ್ಕಳ ಕಲಿಕೆಗೆ ಕಂಪ್ಯೂಟರ್ ಗಳಿದ್ದರೂ ನಿರ್ವಹಣೆ ಕೊರತೆಯಿಂದಾಗಿ ಹಾಳಾಗಿವೆ, ಆಟದ ಮೈದಾನ, ಸಮರ್ಪಕ ಶೌಚಾಲಯ ವ್ಯವಸ್ಥೆ, ಶಾಲಾ ಕಾಂಪೌಂಡ್ ಇಲ್ಲದೇ ಇರುವುದರಿಂದ ಸುತ್ತಲಿನ ಜಮೀನುಗಳಿಂದ ಬರುವ ನೀರಿಂದ ಜಲಾವೃತಗೊಂಡ ಕಾರಣ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಉಲ್ಬಣ ಗೊಳ್ಳುತ್ತಿದ್ದು, ಈ ಎಲ್ಲಾ ಸಮಸ್ಯೆಗಳಿಂದಾಗಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆಗೆ ದಾಖಲಾತಿ ಮಾಡಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಮುಖ್ಯವಾಗಿ ಹಳೆಯ ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ಹಲವು ಬಾರಿ ಮೇಲಾಧಿಕಾರಿಗಳಿಗೆ ಗಮನಕ್ಕೆ ತಂದರೂ ಸಮಸ್ಯೆ ಬಗ್ಗೆ ಸ್ಪಂದಿಸಿಲ್ಲವೆಂದು ಉಪಸ್ಥಿತರಿದ್ದ ಗ್ರಾಮಸ್ಥರಾದ ವಿಜಯ್ ಸ್ವಾಮಿ, ಹನುಮಂತಪ್ಪ ಮಾಜಿ ಸೈನಿಕರು, ಹಾಲೇಶ್ ಕೊಡತಾಳ್, ಯೋಗೇಶ್, ರವಿ ಟಿ, ಪುಂಡಪ್ಪ, ನಾಗರಾಜ್ ಕೆ.ಡಿ, ರಮೇಶ್, ಡಿ ಹರೀಶ್ ಆರೋಪಿಸಿದರು. ಈ ವೇಳೆ ಮಾತನಾಡಿದ ವಿನಯ್ ಕುಮಾರ್ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ತನ್ನ ಕೈಯಲ್ಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದರು.