SUDDIKSHANA KANNADA NEWS/ DAVANAGERE/ DATE:23-03-2025
ದಾವಣಗೆರೆ: ನಗರದ ಹಳೇ ಭಾಗದಲ್ಲಿನ ಹೆರಿಗೆ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ದಾವಣಗೆರೆ ನಗರದ ಹಳೇ ಪಿಬಿ ರಸ್ತೆಯಲ್ಲಿನ ಖಬರಸ್ಥಾನದಲ್ಲಿ 25 ಲಕ್ಷ ಮೌಲ್ಯದ ವಜುಖಾನ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
30 ಹಾಸಿಗೆಗಳಿದ್ದ ಆಸ್ಪತ್ರೆಯಲ್ಲಿ ಪ್ರಸ್ತುತ 120 ಹಾಸಿಗೆ ವ್ಯವಸ್ಥೆ ಇದ್ದು ಹೆಚ್ಚುವರಿ ಜಮೀನು ಪಡೆದು 700 ರಿಂದ 800 ಹಾಸಿಗೆ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ. ಸರ್ವರಿಗೂ ಉತ್ತಮ ಆರೋಗ್ಯ ಲಭಿಸಲು ಬಾಪೂಜಿ ಆಸ್ಪತ್ರೆಯ ಸಹಯೋಗದೊಂದಿಗೆ ಅಗತ್ಯ ಕಾರ್ಯಗಳನ್ನು ನಡೆಸಲು ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತಂಜುಮುಲ್ ಮುಸ್ಲಿಂಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ಜನಾಬ್ ಶೇಕ್ ದಾದಾಪೀರ್, ಮಾಜಿ ಮೇಯರ್ ಕೆ.ಚಮನ್ ಸಾಬ್, ಮಾಜಿ ಸದಸ್ಯರಾದ ಎ.ಬಿ ರಹೀಂ ಸಾಬ್, ಹರಿಹರದ ಕಾಂಗ್ರೆಸ್ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್, ಮೌಲಾನ ಮಹಮ್ಮದ್ ಅಲಿಸಾಬ್, ಅಲ್ಲಮಾನ್ ನಿರಾಜ್, ಖಾದ್ರಿಸಾಬ್, ಮಸೀದ್ ಮೌಲಾನ, ನಜೀರ್ ಸಾಬ್, ಖಜಾಂಚಿ ಶಂಶುದ್ದಿನ್ ಸೇರಿದಂತೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ನ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಇತರರು ಉಪಸ್ಥಿತರಿದ್ದರು.