SUDDIKSHANA KANNADA\ DATE:22-12-2023
ಹಿಜಾಬ್ ನಿಷೇಧ ವಾಪಸ್ ಗೆ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿರುವೆ: ಸಿಎಂ ಸಿದ್ದರಾಮಯ್ಯ
ನಂಜನಗೂಡು: ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ಮಾತನಾಡಿದ ಅವರು, ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದೀನಿ ಎಂದರು
ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ?
ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ? ಎಂದು ಪ್ರಶ್ನಿಸಿದರು.
ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದರು.