SUDDIKSHANA KANNADA NEWS/ DAVANAGERE/ DATE:21-02-2025
ಬೆಂಗಳೂರು: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ.
ಕಳೆದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಜಾಬ್ ವಿವಾದ ಭುಗಿಲೆದ್ದಿತ್ತು. ಹಿಜಾಬ್ ಧರಿಸಲು ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು. ಸಿಎಂ ಸಿದ್ದರಾಮಯ್ಯರು ಹಿಜಾಬ್ ಪರ ಮಾತನಾಡಿದ್ದರು. ಅದೇ ರೀತಿ ಕಾಂಗ್ರೆಸ್ ಕೂಡ ಬೆಂಬಲಿಸಿತ್ತು. ಈ ದಿನದ ಸರ್ಕಾರ ಆದೇಶ ಹೊರಡಿಸಬೇಕು. ಪಿಯುಸಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯುವಾಗ ಹಿಜಾಬ್ ಧರಿಸಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಶಿಕ್ಷಣ ಸಚಿವರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ರಜಾಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಲಾಗಿತ್ತು. ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಶಾಲೆಗೆ ಬರಬೇಕು, ಪರೀಕ್ಷೆ ಬರೆಯಬೇಕು ಎಂದು ಸೂಚಿಸಲಾಗಿತ್ತು.
ಮುಸ್ಲಿಂ ವಿದ್ಯಾರ್ಥಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಫೆ. 10ರಂದು ಹೈಕೋರ್ಟ್ ನಿಂದ ಮಧ್ಯಂತರ ಆದೇಶ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್ ಪಕ್ಷವು ಹಿಜಾಬ್ ಪರವೇ ಇದೆ. ಹಾಗಾಗಿ, ಈ ಬೇಡಿಕೆ ಈಡೇರಿಸಬೇಕು ಎಂಬ ಒತ್ತಾಯ ಮುಸ್ಲಿಂ ಮುಖಂಡರಾಗಿದ್ದರೆ, ರಾಜ್ಯ ಸರ್ಕಾರ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
ಈ ಮಧ್ಯೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ಕೋರ್ಟ್ ಏನು ಹೇಳಿದೆಯೋ ಅದನ್ನೇ ಪಾಲಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.